ಕೋಲಾರ ನ.11 : ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಇದೇ ಸಂದರ್ಭ ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಂಸದ ಮುನಿಸ್ವಾಮಿ, ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕ ಕೆ.ವೈ.ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ ಹಾಜರಿದ್ದರು.