ಕುಶಾಲನಗರ ನ.12 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ “ಸ್ವಚ್ಛ ದೀಪಾವಳಿ-ಶುಭ ದೀಪಾವಳಿ” ಆಚರಣೆ ನಡೆಯಿತು.
ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು ಮಾತನಾಡಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜತೆಗೆ ಪ್ರಾಣಿ-ಪಕ್ಷಿಗಳ ಜೀವಕ್ಕೂ ಅಪಾಯವಿದೆ. ಹಾಗಾಗಿ, ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಪ್ಲಾಸ್ಟಿಕ್ ಮುಕ್ತ ಹಾಗೂ ಮಾಲಿನ್ಯ ರಹಿತವಾಗಿ ಆಚರಿಸಬೇಕಿದೆ ಎಂದರು.
‘ಸ್ವಚ್ಛ ದೀಪಾವಳಿ-ಶುಭ ದೀಪಾವಳಿ’ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಎಲ್ಲರೂ ಸಹಕರಿಸಿದರೆ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ತಡೆಗಟ್ಟಲು ಸಾಧ್ಯವಾಗುತ್ತದೆ. ನಾವು ಮಾಲಿನ್ಯರಹಿತ ಹಬ್ಬಗಳ ಆಚರಣೆಗೆ ವಿಶೇಷ ಒತ್ತು ನೀಡಬೇಕು ಎಂದು ತಿಳಿಸಿದರು.
ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ನಿರ್ದೇಶಕ ಎಂ.ಎನ್.ವೆಂಕಟನಾಯಕ್ ಹಸಿರು ದೀಪಾವಳಿ ಆಚರಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷ ಭಾರದ್ವಾಜ ಕೆ.ಆನಂದತೀರ್ಥ, ಹೆಬ್ಬಾಲೆ ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಲ್.ರಮೇಶ್, ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಚ್.ವಿ.ಶಿವಪ್ಪ, ಕಾಲೇಜು ಪ್ರಾಂಶುಪಾಲ ಎಂ.ಕೆ.ವಿಜಯಕುಮಾರ್, ಪ್ರೌಢಮುಖ್ಯ ಶಿಕ್ಷಕ ಬಸವರಾಜಶೆಟ್ಟಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಸಂಚಾಲಕ ಎಂ.ಎನ್.ಚಂದ್ರಮೋಹನ್, ಮೈಸೂರಿನ ಉದ್ಯಮಿ ಎಚ್.ಕೆ.ಪ್ರಸನ್ನ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ನಾಗೇಶ್, ಕೋಶಾಧಿಕಾರಿ, ಕೆ.ವಿ.ಉಮೇಶ್, ಕಸಾಪ ಹೆಬ್ಬಾಲೆ ವಲಯ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ, ಕಾರ್ಯದರ್ಶಿ ಕವಿತಾ ಪುಟ್ಟೇಗೌಡ, ನಿವೃತ್ತ ಮುಖ್ಯ ಶಿಕ್ಷಕ ಎಚ್.ಎಸ್.ಲೋಕೇಶ್, ವಿವಿಧ ಸಂಸ್ಥೆಗಳ ಪ್ರಮುಖರಾದ ಎ.ಆರ್.ಮಮತ, ಟಿ.ಜಿ.ಯತೀಶ್, ಕೆ.ಕೆ.ನಾಗರಾಜಶೆಟ್ಟಿ, ಎಚ್.ಬಿ.ದಿನೇಶಚಾರಿ, ಟಿ.ಬಿ.ಮಂಜುನಾಥ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*