ಮಡಿಕೇರಿ ನ.12 : ಚಿತ್ರಕಲೆ ಮಕ್ಕಳ ಭಾವನೆ ಮತ್ತು ಕಲ್ಪನೆಯನ್ನು ಅನಾವರಣಗೊಳಿಸಬಲ್ಲ ಉತ್ತಮ ಕಲಾಪ್ರಕಾರವಾಗಿದೆ. ಪ್ರತಿಭೆಗಳ ಅನಾವರಣಕ್ಕೆ ವೇದಿಕೆಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಅರಮೇರಿ ಕಳಂಚೇರಿ ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ತಿಳಿಸಿದ್ದಾರೆ.
ಮಡಿಕೇರಿಯ ಮಹದೇವಪೇಟೆಯ ಎಸ್‌ಎಸ್ ಆಸ್ಪತ್ರೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಕ್ರೆಸೆಂಟ್ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಸ್ತುತ ದಿನಮಾನದ ವಿಷಯಗಳನ್ನು ನೀಡಲಾಗಿದೆ. ಇದರಲ್ಲಿ ಪ್ರಕೃತಿಯೂ ಒಂದಾಗಿದೆ, ಪ್ರಕೃತಿಯನ್ನು ಉಳಿಸಿ ಬೆಳೆಸಲು ಪೋಷಕರು ಮಕ್ಕಳಿಗೆ ಪ್ರೇರಣೆಯನ್ನು ನೀಡಬೇಕು ಎಂದು ಕರೆ ನೀಡಿದರು.
ಚಿತ್ರಕಲೆಗೆ ದೊಡ್ಡ ಇತಿಹಾಸವಿದೆ, ಈ ಕಲೆಯನ್ನು ಉಳಿಸಿ ಬೆಳೆಸಲು ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ. ಮಕ್ಕಳಲ್ಲಿರುವ ಚಿತ್ರಕಲಾ ಪ್ರತಿಭೆಯನ್ನು ಅನಾವರಣಗೊಳಿಸಲು ಈ ರೀತಿಯ ಸ್ಪರ್ಧೆಗಳು ಹೆಚ್ಚು ಸಹಕಾರಿಯಾಗಿದೆ. ಮಕ್ಕಳ ದಿನಾಚರಣೆಯ ಹಿನ್ನೆಲೆ ಎಸ್‌ಎಸ್ ಆಸ್ಪತ್ರೆ ಅತಿ ಕಾಳಜಿಯಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶಿಲ್ಪ ಸತೀಶ್ ಅವರು, ಪ್ರತಿವರ್ಷ ಈ ರೀತಿಯ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಮೆಡಿಕಲ್ ಕಾಲೇಜ್ ನ ಬೋಧಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರೂಪೇಶ್ ಗೋಪಾಲ್ ಎಂ.ಎಸ್ ಅವರು, ಎಲ್ಲಾ ಸಮಾಜ ಮತ್ತು ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಇದೊಂದು ಉತ್ತಮ ಪ್ರಯತ್ನವಾಗಿದ್ದು, ಪ್ರತಿಭೆಗಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರುವ ಕೆಲಸ ಆಗಬೇಕಾಗಿದೆ ಎಂದು ತಿಳಿಸಿದರು.
ಮೆಡಿಕಲ್ ಕಾಲೇಜ್ ನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸತೀಶ್ ಶಿವಮಲ್ಲಯ್ಯ ಅವರು ಪ್ರಾಸ್ತವಿಕ ನುಡಿಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ನಗರಸಭಾ ಸದಸ್ಯರಾದ ಕಲಾವತಿ, ಎಎಲ್‌ಜಿ ಕ್ರೆಸೆಂಟ್ ಸ್ಕೂಲ್ ನ ಟ್ರಸ್ಟಿ ಹಾಗೂ ನಿರ್ದೇಶಕ ಹನೀಫ್, ಶಾಲೆಯ ಉಪಪ್ರಾಂಶುಪಾಲರಾದ ಸುಲ್ಲಾಹ್ತ್, ಜಿಲ್ಲಾ ಸಹಾಯಕ ಔಷಧ ನಿಯಂತ್ರಕ ಗುರುನಾಥ ಪಾಲ್ಗೊಂಡಿದ್ದರು.
ತೇಜಶ್ರೀ, ರಶ್ಮಿ ಹಾಗೂ ಶ್ರದ್ಧಾ ಕಟ್ಟೆಮಾಡು ಪ್ರಾರ್ಥಿಸಿ, ಆರ್.ಕೆ ಲ್ಯಾಬ್ ಮಾಲೀಕರಾದ ಪ್ರದೀಪ್ ಕುಮಾರ್ ಕೆ.ಎಸ್ ಸ್ವಾಗತಿಸಿ, ತೇಜಸ್ ಗೌಡ ಹಾಗೂ ದಿಲೀಪ್ ನಿರೂಪಿಸಿ, ಆರ್.ಕೆ ಲ್ಯಾಬ್ ನ ವ್ಯವಸ್ಥಾಪಕ ನಿರ್ದೇಶಕರಾದ ಕವಿತಾ ಪ್ರದೀಪ್ ಕುಮಾರ್ ವಂದಿಸಿದರು.
ಎಸ್‌ಎಸ್ ಆಸ್ಪತ್ರೆಯ ಸಿಬ್ಬಂದಿಗಳಾದ ಧರ್ಮಾವತಿ, ಹರ್ಷಿತಾ, ಮಾನಸ, ಅಕ್ಷಿತಾ ಹಾಗೂ ಚುಮ್ಮಿ ಉಪಸ್ಥಿತರಿದ್ದರು.
::: ವಿಜೇತರ ವಿವರ :::
ಎಲ್‌ಕೆಜಿಯಿಂದ 1ನೇ ತರಗತಿವರೆಗಿನ ವಿದ್ಯಾರ್ಥಿಗಳ ವಿಭಾಗದಲ್ಲಿ ಪ್ರಥಮ ಬಹುಮಾನ (ರೂ.2ಸಾವಿರ) ದುಹಾ ಫಾತಿಮಾ ಯುಕೆಜಿ ಎಎಲ್‌ಜಿ ಕ್ರೆಸೆಂಟ್ ಶಾಲೆ, ದ್ವಿತೀಯ (1,500 ರೂ.) ರಿಥ್ವಿಕ್, 1ನೇ ತರಗತಿ ಕೇಂದ್ರೀಯ ವಿದ್ಯಾಲಯ ಕೊಡಗು, ತೃತೀಯ ಬಹುಮಾನ (1ಸಾವಿರ ರೂ.) ಶೌರ್ಯ ಕುಶಾಲಪ್ಪ ಎಲ್‌ಕೆಜಿ, ಕೊಡಗು ವಿದ್ಯಾಲಯ ಪಡೆದುಕೊಂಡರು.
2ನೇ ತರಗತಿಯಿಂದ 6ನೇ ತರಗತಿ ವರೆಗಿನ ವಿಭಾಗದಲ್ಲಿ ಪ್ರಥಮ ಬಹುಮಾನ (3,500ರೂ.) ಬಿನೀತ್ ಕೆ.ಪಿ 6ನೇ ತರಗತಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ದ್ವಿತೀಯ ಬಹುಮಾನ (ರೂ.3ಸಾವಿರ) ಎಂ.ಆರ್.ಕಿರಣಕಾಂತ್, 5ನೇ ತರಗತಿ ಕೇಂದ್ರೀಯ ವಿದ್ಯಾಲಯ, ತೃತೀಯ ಬಹುಮಾನ (2,500 ರೂ.) ಬಾನ್ವಿ ಕೆ.ಎಸ್, 6ನೇ ತರಗತಿ, ಸಂತ ಮೈಕಲರ ಶಾಲೆ ಪಡೆದುಕೊಂಡರು.
7ನೇ ತರಗತಿಯಿಂದ 10ನೇ ತರಗತಿವರೆಗಿನ ವಿಭಾಗದಲ್ಲಿ ಪ್ರಥಮ ಬಹುಮಾನ (5 ಸಾವಿರ ರೂ.) ಹರ್ಷಿತ್ ಪೊನ್ನಪ್ಪ 8ನೇ ತರಗತಿ, ಸಂತ ಜೋಸೆಫರ ಶಾಲೆ, ಮಡಿಕೇರಿ, ದ್ವಿತೀಯ ಬಹುಮಾನ (4,500 ರೂ.) ಮೌಲ್ಯ ಜಿ.ಪಿ., 9ನೇ ತರಗತಿ, ಸಂತ ಜೋಸೆಫರ ಶಾಲೆ ಮಡಿಕೇರಿ, ತೃತೀಯ ಬಹುಮಾನ (4 ಸಾವಿರ ರೂ.) ಧ್ರುವ ನಂಜಪ್ಪ 9ನೇ ತರಗತಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಪಡೆದುಕೊಂಡರು.
ಪ್ರತಿ ವಿಜೇತರಿಗೆ ನಗದು ಬಹುಮಾನದೊಂದಿಗೆ ಪದಕ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು. ಸ್ಪರ್ಧೆಯಲ್ಲಿ ಸುಮಾರು 400 ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಎಲ್ಲರಿಗೂ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*