ಸೋಮವಾರಪೇಟೆ ನ.13 : ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸಹಕಾರಿಯಾಗಲಿದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.
ಪಟ್ಟಣದ ಸೋಮೇಶ್ವರ ದೇವಾಲಯದ ಬಳಿಯ ಮೂಕಾಂಬಿಕಾ ಕಂಪ್ಯೂಟರ್ ಆವರಣದಲ್ಲಿ ಕರ್ನಾಟಕ ಒನ್, ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರು ಅರ್ಜಿ ಸಲ್ಲಿಸಲು ಹಾಗೂ ಸವಲತ್ತು ಪಡೆಯಲು ಉಂಟಾಗುವ ಜನಸಂದಣಿ ತಪ್ಪಿಸುವುದರೊಂದಿಗೆ ಜನಸಾಮಾನ್ಯರ ಬಳಿಗೆ ಇಲಾಖೆ ತಲುಪಿಸಲು ಪಂಚಾಯ್ತಿಯ ಮಟ್ಟದಲ್ಲಿ ಗ್ರಾಮ ಒನ್ ಹಾಗೂ ತಾಲೂಕು ಮಟ್ಟದಲ್ಲಿ ಕರ್ನಾಟಕ ಒನ್ ಎಂಬ ಸಮಗ್ರ ನಾಗರೀಕ ಸೇವಾ ಕೇಂದ್ರವನ್ನು ಆರಂಭಿಸಿದೆ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ತಾಲೂಕು ದಂಡಾಧಿಕಾರಿ,ತಹಶೀಲ್ದಾರ್ ನರಗುಂದ ಮಾತನಾಡಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಈ ಕರ್ನಾಟಕ ಒನ್ ಇಲ್ಲಿ ಸರ್ಕಾರಿ ಕಚೇರಿಗಳಲ್ಲಿ ನೀಡಬಹುದಾದ ಅರ್ಜಿಗಳನ್ನು ಸಲ್ಲಿಸಬಹುದು, ಹಲವು
ದಾಖಲೆಗಳನ್ನು ಪಡೆಯಬಹುದು ಎಂದರು.
ಕಾರ್ಯಕ್ರಮದಲ್ಲಿ ಪ.ಪಂ ಸದಸ್ಯರುಗಳಾದ ಬಿ.ಸಿ.ವೆಂಕಟೇಶ್, ಶೀಲಾಡಿಸೋಜ, ಮೋಹಿನಿ, ಬಿಟ್ಟು ಬಿ.ಆರ್.ಮಹೇಶ್, ಪ.ಪಂ ಮುಖ್ಯಾಧಿಕಾರಿ ನಾಚಪ್ಪ, ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ಕರ್ನಾಟಕ ಒನ್ ವ್ಯವಸ್ಥಾಪಕ ಎಸ್.ಚಂದ್ರು, ಪ್ರಮುಖರುಗಳಾದ ಸೋಮೇಶ್, ಶರತ್, ಲೋಹಿತಾಶ್ವ, ದಂತ ವೈದ್ಯ ಸೂರ್ಯ ವೆಂಕಟೇಶ್, ಅಭಿಯಂತರ ಎಸ್.ಎಂ.ಧನುಷ್ ಹಾಗೂ ಸೇವಾ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*