ಮಡಿಕೇರಿ ನ.13 : ತಲಕಾವೇರಿ ಕ್ಷೇತ್ರದ ತಕ್ಕ ಮುಖ್ಯಸ್ಥರಾಗಿರುವ ಕೋಡಿ ಮೋಟಯ್ಯ ಅವರ ರಾಜೀನಾಮೆ ಕೇಳುವುದು ಅರ್ಥಹೀನ ಪ್ರಸ್ತಾಪವೆಂದು ಕೊಡಗು ಗೌಡ ವಿದ್ಯಾಸಂಘದ ನಿರ್ದೇಶಕ ಸೂದನ ಎಸ್.ಈರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಗಾವಿ ಹಾಗೂ ಶ್ರೀ ರಂಗಪಟ್ಟಣದ ಮಠಾಧೀಶರು ಭಕ್ತಿ ಮತ್ತು ಅಭಿಮಾನದಿಂದ ತಲಕಾವೇರಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಕನ್ನಡ ರಾಜ್ಯೋತ್ಸವವಾದ ಕಾರಣ “ಕನ್ನಡ” ಧ್ವಜ ಪ್ರದರ್ಶಿಸಿದ್ದಾರೆಯೇ ಹೊರತು ಆರೋಹಣ ಮಾಡಿಲ್ಲ. ಕನ್ನಡ ನಾಡಿನಲ್ಲಿ ಕನ್ನಡ ಧ್ವಜ ಪ್ರದರ್ಶಿಸಿದರೆ ತಪ್ಪೇನು ಇಲ್ಲ, ಈ ವಿಚಾರದಲ್ಲಿ ವಿನಾಕಾರಣ ಕೋಡಿ ಮೋಟಯ್ಯ ಅವರನ್ನು ಎಳೆದು ತಂದಿರುವುದು ಖಂಡನೀಯವೆಂದು ತಿಳಿಸಿದ್ದಾರೆ.
ಪರಂಪರೆಯಂತೆ ತಲಕಾವೇರಿ ಕ್ಷೇತ್ರದಲ್ಲಿ ಕೋಡಿ ಮನೆಯವರು ತಕ್ಕ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ಭಕ್ತಿಯಿಂದ ಕಾವೇರಿ ಮಾತೆಯ ಸೇವೆ ಮಾಡುತ್ತಿದ್ದಾರೆ. ಯಾವುದೋ ಒಂದು ವಿಚಾರವನ್ನು ನೆಪವಾಗಿಟ್ಟುಕೊಂಡು ತಕ್ಕ ಮುಖ್ಯಸ್ಥರತ್ತ ಬೆರಳು ತೋರುವ ಕ್ರಮವನ್ನು ವೈಯುಕ್ತಿಕ ದ್ವೇಷ ಎಂದು ಭಾವಿಸಬೇಕಾಗುತ್ತದೆ. ಯಾರೆಲ್ಲ “ಕಾವೇರಿ” ನದಿಯ ನೀರು ಸೇವಿಸಿ ಪುನೀತರಾಗುತ್ತಾರೋ ಅವರೆಲ್ಲರಿಗೂ ಮಾತೆಯನ್ನು ನಮಿಸುವ ಹಕ್ಕು ಇದೆ ಎಂದು ಪ್ರತಿಪಾದಿಸಿದ್ದಾರೆ.
ತಲಕಾವೇರಿ ಕ್ಷೇತ್ರದಲ್ಲಿ ಈ ಹಿಂದೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿದಾಗ ಮೂಲ ಸ್ವರೂಪಕ್ಕೆ ದಕ್ಕೆ ಆಗಲಿಲ್ಲವೆ. ವರ್ಷದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೂತಕದ ನಡುವೆ ತಲಕಾವೇರಿ ಕ್ಷೇತ್ರ ಪ್ರವೇಶಿಸಲಿಲ್ಲ. ಆದರೆ ಅವರ ಪಕ್ಷದ ಕಾರ್ಯಕರ್ತರೊಬ್ಬರು ಬೊಗಸೆಯಲ್ಲಿ ಕುಂಡಿಕೆಯ ತೀರ್ಥವನ್ನು ತಂದು ಸೇವಿಸುವಂತೆ ಮಾಡಿದರು. ಸೂತಕವಿದ್ದರೂ ತೀರ್ಥವನ್ನು ನೀಡಿರುವುದರಿಂದ ಪಾವಿತ್ರ್ಯತೆಗೆ ದಕ್ಕೆ ಬರಲಿಲ್ಲವೇ ಎಂದು ಸೂದನ ಈರಪ್ಪ ಪ್ರಶ್ನಿಸಿದ್ದಾರೆ.
ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ವೈಯುಕ್ತಿಕ ತೇಜೋವಧೆ ಮಾಡುವುದನ್ನು ಬಿಟ್ಟು ಕೋಟ್ಯಾಂತರ ಜನರಿಗೆ ಕುಡಿಯುವ ನೀರನ್ನು ನೀಡುವ ಮಾತೆ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಚಿಂತನೆಗಳನ್ನು ಮಾಡಲಿ ಎಂದು ಒತ್ತಾಯಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*