ಮಡಿಕೇರಿ ನ.13: ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಗ್ರೇಡ್-3 ವೃಂದದ 1 ಹಿಂಬಾಕಿ (ಬ್ಯಾಕ್ಲಾಗ್) ಹುದ್ದೆ ಸೇರಿದಂತೆ ಒಟ್ಟು 2 ಹುದ್ದೆಗಳು, ಬೆರಳಚ್ಚುಗಾರರ ವೃಂದದ 17 ಹುದ್ದೆಗಳು, ನಕಲು-ಬೆರಳಚ್ಚುಗಾರರ ವೃಂದದ 7 ಹುದ್ದೆಗಳು, ಆದೇಶಿಕ ಜಾರಿಕಾರ ವೃಂದದ 8 ಹುದ್ದೆಗಳು ಹಾಗೂ ಜವಾನ/ ಸೇವಕ ವೃಂದದ 30 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ https://kodagu.dcourts.gov.in/notice-category/recruitments/ ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ ಡಿ.10 ರ ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಪೂರ್ಣ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸಲು ಡಿ.11 ಕೊನೆಯ ದಿನವಾಗಿದೆ. ಆನ್ಲೈನ್ ಹೊರತುಪಡಿಸಿ, ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಮಡಿಕೇರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಸಿ.ಶಾಮ್ ಪ್ರಸಾದ್ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*