ಮಡಿಕೇರಿ ನ.13 : ಮಡಿಕೇರಿ-ವಿರಾಜಪೇಟೆ 66 ಕೆವಿ ವಿದ್ಯುತ್ ಮಾರ್ಗದ ಕಾಮಗಾರಿ ಸಂಬಂಧ ಹಾಲಿ ಚಾಲ್ತಿಯಲ್ಲಿರುವ 66/11 ಕೆವಿ ಮಡಿಕೇರಿ ವಿದ್ಯುತ್ ವಿತರಣಾ ಕೇಂದ್ರದ ಒಳಬರುವ 66 ಕೆವಿ ಮಡಿಕೇರಿ-ಕುಶಾಲನಗರ ವಿದ್ಯುತ್ ಮಾರ್ಗದಲ್ಲಿ ಪರಿಶೀಲನೆ ಮತ್ತು ನಿರ್ವಹಣೆ ಕಾರ್ಯವನ್ನು ಮಾಡಬೇಕಿರುವುದರಿಂದ ನ.15 ರಂದು ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಮಡಿಕೇರಿ ಪಟ್ಟಣ, ಬೋಯಿಕೇರಿ, ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*