ಕುಶಾಲನಗರ ನ.13. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕುಶಾಲನಗರ ಪುರಸಭೆ ವತಿಯಿಂದ ತಾಲ್ಲೂಕಿನ
ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ
(ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಆಶ್ರಯದಲ್ಲಿ ‘ಗೋ ಗ್ರೀನ್ ಅಭಿಯಾನ’ದಡಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತ ಪರಿಸರ ಜಾಗೃತಿ ಅಭಿಯಾನ ನಡೆಯಿತು.
ಸ್ವಚ್ಛ ದೀಪಾವಳಿ – ಶುಭ ದೀಪಾವಳಿ ಆಚರಣೆ ಪರಿಕಲ್ಪನೆಯೊಂದಿಗೆ “ಹಸಿರು ದೀಪಾವಳಿ ಆಚರಿಸುವ ಅಗತ್ಯತೆ’ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಪಟಾಕಿ ಮತ್ತು ಸಿಡಿಮದ್ದು ಸಿಡಿಸುವುದರಿಂದ ಪರಿಸರ ಮತ್ತು ಆರೋಗ್ಯಕ್ಕೆ ಹಾನಿ ಹಾಗೂ ಮಾಲಿನ್ಯದ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಪಟಾಕಿ ಸಿಡಿಸುವುದರಿಂದ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದ ಜತೆಗೆ ಪಕ್ಷಿ-ಪ್ರಾಣಿ ಹಾಗೂ ಪರಿಸರಕ್ಕೆ ಧಕ್ಕೆಯುಂಟಾಗುತ್ತದೆ. ಈ ದಿಸೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ
ಕುರಿತು ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ನಾಗರಿಕರು ಅಂಗಡಿ- ಮುಂಗಟ್ಟುಗಳಿಗೆ ತೆರಳಿ ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಹಣತೆ ಬೆಳಗಿಸಿ ಹಸಿರು ದೀಪಾವಳಿ ಆಚರಿಸಿ ಎಂದು ಮನವಿ ಮಾಡಿದರು.
ಈ ದಿಸೆಯಲ್ಲಿ ವಿದ್ಯಾರ್ಥಿಗಳು ಅಂಧತ್ವದ ಅಪಾಯಗಳನ್ನು ಸೃಷ್ಟಿಸುವ ಪಟಾಕಿಯನ್ನು ಬಿಟ್ಟು ಪರಿಸರ ಸ್ನೇಹಿ ಹಾಗೂ ಹಸಿರು ದೀಪಾವಳಿ ಆಚರಿಸಬೇಕು ಎಂದರು.
ಪರಿಸರಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಸಿಡಿಸುವ ಮೂಲಕ ಮಾಲಿನ್ಯಮುಕ್ತ ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕಿದೆ. ನಾವು ಪ್ರಕೃತಿಗೆ ಯಾವುದೇ ಧಕ್ಕೆಯನ್ನುಂಟು ಮಾಡದೆ ಉತ್ತಮ ಪರಿಸರ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದು ಪ್ರೇಮಕುಮಾರ್ ಮನವಿ ಮಾಡಿದರು.
ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ತ್ಯಜಿಸಿ ಹಣತೆ( ದೀಪ) ಬೆಳಗಿಸಬೇಕು ಎಂದು ಪ್ರೇಮಕುಮಾರ್ ಮನವಿ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ಒಂದು ವಾರದಿಂದ ಹಸಿರು ದೀಪಾವಳಿ ಆಚರಣೆ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕವಾಗಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ
ಎಂದು ತಿಳಿಸಿದ್ದಾರೆ.
ಪರಿಸರಕ್ಕೆ ಯಾವುದೇ ಹಾನಿಯನ್ನುಂಟು ಮಾಡದ ರೀತಿಯಲ್ಲಿ ದೀಪಾವಳಿ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.
ಜಿಲ್ಲೆಯಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದು ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಕೆ.ಆರ್.ಜಗದೀಶ್ ಸಂತಸ ವ್ಯಕ್ತಪಡಿಸಿದರು.
ಕೆಲವು ಪಟಾಕಿ ವ್ಯಾಪಾರಿಗಳು ಹಸಿರು ಪಟಾಕಿ ಮಾರುವ ನೆಪದಲ್ಲಿ ಹೆಚ್ಚು ಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ.ಈ ದಿಸೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ, ಪುರಸಭೆ ಹಾಗೂ ಪೊಲೀಸ್ ಅಧಿಕಾರಿಗಳು ಪಟಾಕಿ ಅಂಗಡಿಗಳನ್ನು ಪರಿಶೀಲಿಸಿ ಕಾನೂನು ಪ್ರಕಾರ ಪಟಾಕಿಗಳನ್ನು ಮಾರಾಟ ಮಾಡಲು ಕ್ರಮ ಜರುಗಿಸಬೇಕು ಎಂದು ಒತ್ತಾಯಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕವಾಗಿ ಎಲ್ಲರೂ ಸೇರಿ ಇಂತಹ ಪರಿಸರ ಸ್ನೇಹಿ ಚಟುವಟಿಕೆಗಳ ಮೂಲಕ ಜನರಲ್ಲಿ ಪರಿಸರದ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದರು.
ಕುಶಾಲನಗರ ಪಟ್ಟಣದಲ್ಲಿ ಹಸಿರು ದೀಪಾವಳಿ ಜಾಗೃತಿ ಅಭಿಯಾನ ಕುಶಾಲನಗರ ಪಟ್ಟಣದಲ್ಲಿ ನಡೆದ ಹಸಿರು ದೀಪಾವಳಿ ಜನಜಾಗೃತಿ ಆಂದೋಲನಲ್ಲಿ ವಿದ್ಯಾರ್ಥಿಗಳು “ಹಣತೆ ಹಚ್ಚೋಣ, ಹಸಿರು ದೀಪಾವಳಿ ಆಚರಿಸೋಣ, ಮಾಲಿನ್ಯ ಪಟಾಕಿ ತ್ಯಜಿಸೋಣ ಮಾಲಿನ್ಯ ತಡೆಯೋಣ, ಮಾಲಿನ್ಯ ಮುಕ್ತ ದೀಪಾವಳಿ ಆಚರಿಸೋಣ ಬನ್ನಿ, ಪರಿಸರ ಸಂರಕ್ಷಿಸೋಣ ಬನ್ನಿ , ಎಂಬಿತ್ಯಾದಿ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದು ಜನರಲ್ಲಿ ಹಸಿರು ದೀಪಾವಳಿ ಆಚರಿಸುವಂತೆ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ಹಣತೆ ಹಚ್ಚೋಣ ಬನ್ನಿ, ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಬನ್ನಿ’ ಎಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು.