ವಿರಾಜಪೇಟೆ ನ.13 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ದೇವಾಲಯದ ಅರ್ಚಕರಾದ ವಾಮನಮೂರ್ತಿ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.
ಮೊದಲಿಗೆ ಅರ್ಚಕರು ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ವನದುರ್ಗೆ, ಶ್ರೀ ನಾಗ ಗುಡಿಯಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆಯನ್ನು ನೆರವೇರಿಸಿ ಅರ್ಚನೆ ಮಾಡಿದರು.
ದೀಪಾವಳಿ ಪ್ರಯುಕ್ತ ತುಳಸಿ ಪೂಜೆಯನ್ನು ದೇವಾಲಯದ ಆವರಣದಲ್ಲಿ ನೆರವೇರಿಸಿ, ಕುಂಕುಮಾರ್ಚನೆ, ಪುಷ್ಪರ್ಚನೆ ಹಾಗೂ ಅಷ್ಟೋತ್ತರವನ್ನು ಪಠಿಸಲಾಯಿತು. ಮಹಾ ಮಂಗಳಾರತಿ ನಂತರ ಪ್ರಸಾದ ವಿತರಣೆನೆರವೇರಿತು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.









