ಮಡಿಕೇರಿ ನ.13 : ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಗರ, ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಪಾವತಿಗೊಳಪಡಿಸಲು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ ಹೊರಹುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಶೆಟ್ಟಿ ಅವರು, ಹೊರಗುತ್ತಿಗೆ ನೌಕರರನ್ನು ನೇರ ವೇತನ ಪಾವತಿಗೆ ಒಳಪಡಿಸದ್ದಿದ್ದಲ್ಲಿ ನ.15 ರಂದು ರಾಜ್ಯವ್ಯಾಪಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ವಾಹನ ಚಾಲಕರು, ನೀರು ಸರಬರಾಜುದಾರರು, ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಯುಜಿಡಿ ಕಾರ್ಮಿಕರು ಸೇರಿದಂತೆ 15ಸಾವಿರಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆ ಆಧಾರದಲ್ಲಿ ಉಳಿಸಿಕೊಂಡಿದೆ.
ನಗರಗಳ ಸ್ವಚ್ಛತೆ ಮತ್ತು ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ ಪೌರಕಾರ್ಮಿಕರ ನೇಮಕಾತಿ ಸಂದರ್ಭವೂ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸದೆ ಗುತ್ತಿಗೆಯಲ್ಲೇ ಉಳಿಸಿಕೊಳ್ಳಲಾಯಿತು. ಪೌರಾಡಳಿತ ಕಾಯ್ದೆ ಪ್ರಕಾರ ಕಸ ಸಾಗಿಸುವ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಲರ್ಸ್, ಯುಜಿಡಿ ಕಾರ್ಮಿಕರನ್ನು ಸಹ ಪೌರಕಾರ್ಮಿಕರೆಂದು ಗುರುತಿಸಸಬೇಕಾಗುತ್ತದೆ. ಆದರೂ ಅಧಿಕಾರಿಗಳು ತಾರತಮ್ಯ ತೋರಿ ನೇರನೇಮಕಾತಿ ಮತ್ತು ನೇರಪಾವತಿಯಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಎಸಗಿದ್ದಾರೆ ಎಂದು ಈರಪ್ಪ ಶೆಟ್ಟಿ ಆರೋಪಿಸಿದ್ದಾರೆ.
ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ತಾರತಮ್ಯ ಕ್ರಮವನ್ನು ಸರ್ಕಾರ ಕೈಬಿಟ್ಟು ಗುತ್ತಿಗೆ ಆಧಾರದ ನೌಕರರನ್ನು ಖಾಯಂಗೊಳಿಸಬೇಕು. ನಮ್ಮ ಮನವಿಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*