ಮಡಿಕೇರಿ ನ.13 : ನೆಲ್ಯಹುದಿಕೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಅರೆಕಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ (ಐದ್ರೋಡಮ್ಮ) ದೇವಿಯ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ನೆಲ್ಯಹುದಿಕೇರಿ ಭಗವತಿ ದೇಗುಲದ ಅರ್ಚಕರಾದ ರಘು ಭಟ್ ಹಾಗೂ ರಾಕೇಶ್ ಭಟ್ ಅವರುಗಳ ನೇತೃತ್ವದಲ್ಲಿ ವಿಶೇಷ ಪೂಜೆಗಳು ನಡೆದವು. ಅಭಿಷೇಕ, ಅಲಂಕಾರ ಮತ್ತು ಮಹಾಪೂಜೆ ನೆರವೇರಿತು. ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ದೇವಾಲಯದ ಅಡಳಿತ ಮಂಡಳಿಯ ಅಧ್ಯಕ್ಷ ರವಿಕುಮಾರ್ ಕೆ.ಎಸ್ ಮಾತನಾಡಿ ರಾಜ್ಯದ ವಿವಿಧ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರು ದೇವಿಯ ದರ್ಶನ ಪಡೆದು ತೆರಳುತ್ತಿದ್ದಾರೆ ಎಂದರು. ಅಡಳಿತ ಮಂಡಳಿಯ ಕಾರ್ಯದರ್ಶಿ ಜಯಣ್ಣ, ಉಪಾಧ್ಯಕ್ಷ ಚಂದ್ರ, ಖಜಾಂಚಿ ಅಳಗು, ಸದಸ್ಯ ಆನಂದ ರಘು ಮತ್ತಿತರರು ಪೂಝೆಯಲ್ಲಿ ಪಾಲ್ಗೊಂಡಿದ್ದರು. (ವರದಿ : ಕಿಶೋರ್ ಕುಮಾರ್ ಶೆಟ್ಟಿ)












