ಲಂಡನ್ ನ.13 : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ತಂಡಕ್ಕೆ ಮಾಜಿ ಪ್ರಧಾನಿಯನ್ನೇ ಸೇರಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್‌ರಚಿಸಿರುವ ಅವರು ಭಾರತೀಯ ಮೂಲದ ವಿವಾದಿತ ಆಂತರಿಕ ಸಚಿವ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಮಹತ್ವದ ಬದಲಾವಣೆ ಮಾಡಿದ್ದು, ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ನೂತನ ವಿದೇಶಾಂಗ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.










