ಮಡಿಕೇರಿ ನ.14 : ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಈತ ಚಿಕಿತ್ಸೆಗಾಗಿ ಅಥವಾ ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ.
ಕೊಡಗಿನ 4- 5 ಕಿ.ಮೀ ದೂರದಲ್ಲಷ್ಟೇ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕೇರಳ ಅರಣ್ಯ ಪ್ರದೇಶದಿಂದ ಕೊಡಗನ್ನು ಪ್ರವೇಶಿಸುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತç ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಭಾಗದ ಆಸ್ಪತ್ರೆ, ಮೆಡಿಕಲ್ ಶಾಪ್ ಮತ್ತು ಹೋಂಸ್ಟೇ ಗಳಿಗೂ ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ.
ನಕ್ಸಲ್ ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಗಡಿಭಾಗವಾದ ಬಿರುನಾಣಿ, ತೆರಾಳು, ಪರಕಟಗೆರೆ ಮತ್ತು ಕುಟ್ಟ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೂಂಬಿಂಗ್ ಕಾರ್ಯಾಚರಣೆ ಕುರಿತು ಚರ್ಚಿಸಿದರು.
ಕಳೆದ ವಾರವಷ್ಟೇ ಕೇರಳ ಗಡಿಯಲ್ಲಿ ಐವರು ನಕ್ಸಲರು ಹಾಗೂ ಕೇರಳ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದು ಇಬ್ಬರನ್ನು ಬಂಧಿಸಲಾಗಿತ್ತು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*