ಮಡಿಕೇರಿ ನ.14 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನವಾದ ಇಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ “ಗೋಪೂಜೆ” ಮಾಡಲಾಯಿತು.
ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರದ್ಧಾಭಕ್ತಿಯಿಂದ ನಡೆದ “ಗೋಪೂಜೆ”ಯಲ್ಲಿ ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್, ಅರ್ಚಕರು, ಸಿಬ್ಬಂದಿ ವರ್ಗ ಹಾಗೂ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಮಹಾಮಂಗಳಾರತಿಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.










