ಕುಶಾಲನಗರ ನ.15 : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ವೇದಿಕೆ ಘಟಕದ ವತಿಯಿಂದ ಕೊಡಮಾಡುವ 2023ನೇ ಸಾಲಿನ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಭಾಜನರಾಗಿದ್ದಾರೆ.
ಕನ್ನಡ ಸಾಹಿತ್ಯ, ನಾಡು, ನುಡಿಯ ಬೆಳವಣಿಗೆಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ಲೋಕೇಶ್ ಸಾಗರ್ ಅವರಿಗೆ ಕೊಡಮಾಡಲಾಗಿದೆ.
ನ.19 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಕರುನಾಡು ಸಾಮರಸ್ಯ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.