ಮಡಿಕೇರಿ ನ.15 : ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ಮತ್ತಷ್ಟು ಹತ್ತಿರವಾಗಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ.
ಭಾಗಮಂಡಲದಲ್ಲಿ ಹೋಬಳಿ ಮಟ್ಟದ ಕಾಂಗ್ರೆಸ್ ಸೇವಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೆಸ್ ಸೇವಾ ಕೇಂದ್ರಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜನಸೇವೆಗಾಗಿಯೇ ಕಚೇರಿಯನ್ನು ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದರಲ್ಲಿ ಸೇವಾ ಕಚೇರಿ ಪ್ರಮುಖ ಪಾತ್ರ ವಹಿಸಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭ ಕೋಳಿಬೈಲು ಸಿ.ವೆಂಕಟೇಶ್ ಅವರನ್ನು ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರ ನೀಡಿದ ಶಾಸಕರು, ಪಕ್ಷ ಸಂಘಟನೆಗೆ ಕಾರ್ಯಕರ್ತರು ಮುಂದಾಗಬೇಕು ಎಂದರು.
ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಡಿಸಿಸಿ ಸದಸ್ಯ ಸುನಿಲ್ ಪತ್ರವೊ, ಚೆಟ್ಟಿಮಾನಿ ಗ್ರಾ.ಪಂ ಸದಸ್ಯ ಹ್ಯಾರಿಸ್, ಕರಿಕೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರನ್ ನಾಯರ್, ಹೋಬಳಿ ಮಟ್ಟದ ವಲಯ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
::: ಮಕ್ಕಳ ದಿನಾಚರಣೆ :::
ಇದಕ್ಕೂ ಮೊದಲು ಚೆಟ್ಟಿಮಾನಿ (ಚೆರಂದೇಟಿ) ಸರ್ಕಾರಿ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡ ಎ.ಎಸ್.ಪೊನ್ನಣ್ಣ ಅವರು, ಮಕ್ಕಳ ದಿನದ ಮಹತ್ವ ಮತ್ತು ದೇಶದ ಮೊದಲ ಪ್ರಧಾನಿ ಜವಹಾರ್ ಲಾಲ್ ನೆಹರು ಅವರ ದೂರದೃಷ್ಟಿ ಯೋಜನೆಗಳನ್ನು ವಿವರಿಸಿದರು. ಭಾರತವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ನೆಹರು ಮಾಡಿದರು ಎಂದು ಶ್ಲಾಘಿಸಿದರು.
ನಂತರ ಭಾಗಮಂಡಲದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು, ವೈದ್ಯರ ಕೊರತೆಯನ್ನು ಶೀಘ್ರವೇ ನಿವಾರಿಸುವುದಾಗಿ ಭರವಸೆ ನೀಡಿದರು.
Breaking News
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*