Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಆದಿವಾಸಿ ಜನರ ಅಭಿವೃದ್ಧಿಗೆ ಶ್ರಮಿಸಿದ ಚೇತನ ಬಿರ್ಸಾ ಮುಂಡಾ : ಎಸ್.ಹೊನ್ನೇಗೌಡ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಆದಿವಾಸಿ ಜನರ ಅಭಿವೃದ್ಧಿಗೆ ಶ್ರಮಿಸಿದ ಚೇತನ ಬಿರ್ಸಾ ಮುಂಡಾ : ಎಸ್.ಹೊನ್ನೇಗೌಡ

ನವೆಂಬರ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.15 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಕಾರದಲ್ಲಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಬಿರ್ಸಾ ಮುಂಡಾ ಜಯಂತಿಯನ್ನು   ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ, ಇತರರು ಬಿರ್ಸಾ ಮುಂಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಬಿರ್ಸಾ ಮುಂಡ ಅವರು ಆದಿವಾಸಿ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಜಾರ್ಖಂಡ್ ರಾಜ್ಯದ ರಾಂಚಿ ಬಳಿ ಜನಿಸಿರುವ ಬಿರ್ಸಾ ಮುಂಡ ಅವರು ಆದಿವಾಸಿ ಜನಾಂಗ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಶ್ರಮಿಸಿದ್ದಾರೆ. ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ಹೇಳಿದರು.
ಬ್ರಿಟಿಷ್ ಸರ್ಕಾರ ಜಾರ್ಖಂಡ್ ಆದಿವಾಸಿಗಳು ವಾಸಿಸುತ್ತಿದ್ದ ಕಾಡು ಮತ್ತು ಅವುಗಳಲ್ಲಿದ್ದ ಹಳ್ಳಿಗಳನ್ನೂ ರಕ್ಷಿತ ಅರಣ್ಯ ಪ್ರದೇಶಗಳೆಂದು ಘೋಷಿಸಿ, ಆ ಮೂಲಕ ಆದಿವಾಸಿಗಳ ಎಲ್ಲಾ ಹಕ್ಕುಗಳನ್ನೂ ಕಿತ್ತುಕೊಂಡಿತು. ಪರಿಣಾಮ ಬ್ರಿಟಿಷರ ಈ ನೀತಿಯ ವಿರುದ್ದ ಬಿರ್ಸಾಮುಂಡ ಅವರು ದೊಡ್ಡ ಹೋರಾಟ ಮಾಡಿದರು. 1893-94 ರಲ್ಲಿ ತನ್ನ ಜನಪ್ರಿಯತೆಯನ್ನೇ ಸ್ವಾತಂತ್ರ್ಯ ಸಂಗ್ರಾಮವಾಗಿ ರೂಪಿಸುವಲ್ಲಿ ಬಿರ್ಸಾ ಮುಂಡ ಯಶಸ್ವಿ ಆದರು ಎಂದು ಎಸ್.ಹೊನ್ನೇಗೌಡ  ತಿಳಿಸಿದರು.
ಬ್ರಿಟಿಷರಿಂದ, ಭೂಮಾಲೀಕರಿಂದ ಮತ್ತು ವ್ಯಾಪಾರಸ್ಥರಿಂದ ಬಿಡುಗಡೆಯ ಹೋರಾಟಕ್ಕೆ ತನ್ನ ಜನರನ್ನು ಸಜ್ಜುಗೊಳಿಸಿದ. 1894 ರ ಅಕ್ಟೋಬರ್, 1 ರಂದು ಚೋಟಾ ನಾಗ್ಪುರ್ ಎಂಬಲ್ಲಿಗೆ ಬೃಹತ್ ಮೆರವಣಿಗೆಗೆ ಕರೆ ನೀಡಿದರು. ‘ಉಳುವವನೇ ಭೂಮಿಯ ಒಡೆಯನಾಗಬೇಕು’ ‘ಮಹಾರಾಣಿಯ ಆಡಳಿತವನ್ನು ಸ್ಥಾಪಿಸಬೇಕು’ ಎಂಬ ಎರಡು ಉದ್ದೇಶಗಳು ಈ ಮೆರವಣಿಗೆಯ ಪ್ರಮುಖ ಅಂಶಗಳಾಗಿದ್ದವು.
ಬಿರ್ಸಾನ ಕರೆಗೆ ಆದಿವಾಸಿಗಳು ಸ್ಪಂದಿಸಿ ಮೆರವಣಿಗೆ ಯಶಸ್ವಿಯಾಯಿತು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಬಿರ್ಸಾನ ಜನಪ್ರಿಯತೆಯನ್ನು ಕಂಡು ಬ್ರಿಟಿಷರು ಕಂಗಾಲಾದರು. ಕೂಡಲೇ ಆತನನ್ನು ಬಂಧಿಸಿ ಹಜಿರಾಬಾದ್ ಜೈಲಿಗೆ ಹಾಕಿದರು. ಎರಡು ವರ್ಷಗಳನ್ನು ಸೆರೆಮನೆಯಲ್ಲಿ ಕಳೆದು ಹೊರಬರುತ್ತಿದ್ದಂತೆಯೇ, ಬಿರ್ಸಾ ತನ್ನ ಚಳುವಳಿಯ ರೂಪವನ್ನೇ ಬದಲಾಯಿಸಿದ. ಬಿಡುಗಡೆಯ ನಂತರ ಭೂಗತನಾದ ಬಿರ್ಸಾ ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟವನ್ನು ಪ್ರಾರಂಭಿಸಿದರು.
ಬ್ರಿಟಿಷರ ಕಚೇರಿ ಕಟ್ಟಡಗಳ ಮೇಲೆ ಅವರನ್ನು ಬೆಂಬಲಿಸುತ್ತಿದ್ದ ಜನರ ಮನೆಗಳ ಮೇಲೆ ಮತ್ತು ಪೊಲೀಸರ ತಂಡಗಳ ಮೇಲೆ ಬಿರ್ಸಾನ ಆದಿವಾಸಿಗಳ ಗೆರಿಲ್ಲಾ ಸೈನ್ಯ ದಾಳಿ ಮಾಡಿತು. ನೂರಾರು ಪೊಲೀಸರನ್ನು ಕೊಂದು ಹಾಕಿತು. ಒಮ್ಮೆ ರಾಂಚಿ ಮತ್ತು ಕುಂತಿ ಎಂಬಲ್ಲಿ ಸುಮಾರು ನೂರಾರು ಕಟ್ಟಡಗಳನ್ನು ಭಸ್ಮ ಮಾಡಿತು. ಬಿರ್ಸಾನನ್ನು ಹಿಡಿದು ಕೊಟ್ಟವರಿಗೆ 500 ರೂ.ಗಳ ಬಹುಮಾನವನ್ನು ಬ್ರಿಟಿಷ್ ಸರ್ಕಾರ ಘೋಷಿಸಿತು. ಚೋಟಾ ನಾಗ್ಪುರ್ ಸುತ್ತಲಿನ 550 ಚದರ ಮೈಲಿ ಪ್ರದೇಶದಲ್ಲಿ ಆತನ ಹೋರಾಟ ವ್ಯಾಪಿಸಿತು.
1899 ರಲ್ಲಿ ಆತ ತನ್ನ ಬಂಡಾಯವನ್ನು ಮತ್ತಷ್ಟು ತೀವ್ರಗೊಳಿಸಿದ. ಕುಂತಿ, ಒಮರ್, ಬಸಿಯ, ರಾಂಚಿ ಮತ್ತಿತರ ಕಡೆಗಳಲ್ಲಿ ಪೊಲೀಸ್ ಠಾಣೆಗಳ ಮೇಲೆ ದಾಳಿಗಳು ನಡೆದವು. 8 ಪೊಲೀಸರು ಕೊಲ್ಲಲ್ಪಟ್ಟು, 32 ಜನ ಪರಾರಿಯಾದರು. ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಿಳಿಯರು ತಮ್ಮ ಪ್ರಾಣಕ್ಕೆ ಹೆದರಿ ಅಲ್ಲಿಂದ ಓಡಿ ಹೋದರು. 89 ಭೂಮಾಲೀಕರ ಮನೆಗಳು ಬೂದಿಯಾದವು. ಚರ್ಚ್ ಮತ್ತು ಬ್ರಿಟಿಷರ ಆಸ್ತಿಗಳಿಗೆ ಬೆಂಕಿಬಿದ್ದವು. ಆದಿವಾಸಿಗಳ ದಂಗೆ ಎಷ್ಟು ತೀವ್ರಗೊಂಡಿತ್ತೆಂದರೆ ರಾಂಚಿಯ ಜಿಲ್ಲಾಧಿಕಾರಿಗೆ ಅದನ್ನು ತಡೆಯಲಾಗದೆ, ಕೊನೆಗೆ ಸೈನ್ಯಕ್ಕೇ ಬರ ಹೇಳಿದ.
1900 ರ ಜನವರಿಯಲ್ಲಿ ಬಿರ್ಸಾ ತನ್ನ ದಂಗೆಯ ಎರಡನೇ ಅಧ್ಯಾಯಕ್ಕೆ ಚಾಲನೆ ನೀಡಿದ. ಈ ಅಧ್ಯಾಯದಲಿ ಬ್ರಿಟಿಷರು ಮಾತ್ರವಲ್ಲ ಅವರೊಂದಿಗೆ ಕೈ ಜೋಡಿಸಿದ್ದ ಲೇವಾದೇವಿಗಾರರು, ಭೂಮಾಲೀಕರು, ಗುತ್ತಿಗೆದಾರರು ಬಿರ್ಸಾನ ಸೈನ್ಯದ ದಾಳಿಗೆ ಗುರಿಯಾದರು. ಬಹಳಷ್ಟು ಜನ ಸಾವಿಗೀಡಾದರು ಲೆಕ್ಕವಿಲ್ಲದಷ್ಟು ಕಟ್ಟಡಗಳು ದ್ವಂಸಗೊಂಡವು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.