ಮಡಿಕೇರಿ ನ.15 : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ನ.21ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಎಂದು ಸಂಘದ ಗೌರವಾಧ್ಯಕ್ಷ ಎಂ.ಎ.ಅಪ್ಪಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಮೈತ್ರಿ ಭವನದಲ್ಲಿ ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಂಘದ ಗೌರವಾಧ್ಯಕ್ಷ ಎಂ.ಎ.ಅಪ್ಪಯ್ಯ, ವಿಶೇಷ ಆಹ್ವಾನಿತರಾಗಿ ಶೈಲಾ ಚಿಣ್ಣಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.
ಸಂಘದಲ್ಲಿ ಜಿಲ್ಲಾ ವ್ಯಾಪ್ತಿಯ 962 ಮಂದಿ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳು ಸದಸ್ಯತ್ವ ಪಡೆಯುವುದರ ಜೊತೆಗೆ ಸರ್ಕಾರದ ಆರೋಗ್ಯ ವಿಮೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
::: ಪುರಸ್ಕಾರ-ಸನ್ಮಾನ ::: ವಾರ್ಷಿಕ ಮಹಾಸಭೆಯಲ್ಲಿ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಇಬ್ಬರು ಮಕ್ಕಳನ್ನು ಹಾಗೂ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅವರು ‘ಮಣವಟ್ಟೀರ ಪೊನ್ನಪ್ಪ’ ಅವರ ಸ್ಮರಣಾರ್ಥ ನೀಡಿರುವ ದತ್ತಿ ನಿಧಿಯಲ್ಲಿ ಕೆಎಸ್‍ಆರ್‍ಪಿಯಲ್ಲಿ ಸೇವೆ ಸಲ್ಲಿಸಿದವರ ಇಬ್ಬರು ಮಕ್ಕಳನ್ನು ಪುರಸ್ಕರಿಸಲಾಗುತ್ತದೆ. ಇದೇ ಸಂದರ್ಭ ಸಂಘದ ಹಿರಿಯ 10 ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅಪ್ಪಯ್ಯ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ, ಉಪಾಧ್ಯಕ್ಷ ಬಿ.ಆರ್.ಲಿಂಗಪ್ಪ, ಕಾರ್ಯದರ್ಶಿ ಎಂ.ಅಚ್ಚುತ್ತನ್ ನಾಯರ್, ನಿರ್ದೇಶಕರಾದ ಎಂ.ಕೆ.ಕಾವೇರಪ್ಪ ಹಾಗೂ ಕೆ.ವೈ.ಹಮೀದ್ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*