ಮಡಿಕೇರಿ ನ.15 : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಿ ತನ್ಮೂಲಕ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣ ಉಂಟುಮಾಡುವಲ್ಲಿ ಶ್ರಮಿಸುತ್ತಿರುವ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು sevasindhu.karnataka.gov.in ಮುಖಾಂತರ ಡಿ.13 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.
ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ 080-22279954/ 9986837037/ 8792662814/ 8792662816/ 08022213530 ಹಾಗೂ ಆಯಾಯ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಯನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುರುವುದಿಲ್ಲ) ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*