ಮಡಿಕೇರಿ ನ.15 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ನಿ. ಇವರ ಸಂಯುಕ್ತ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ’ ದಿನಾಚರಣೆಯು ನ.16 ರಂದು ಬೆಳಗ್ಗೆ 11 ಗಂಟೆಗೆ ಕೊಹಿನೂರು ರಸ್ತೆಯ ಬಾಲಭವನ (ಚೇತನ ಚಿಲುಮೆ) ದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‍ನ ಅಧ್ಯಕ್ಷರಾದ ಸಿ.ಕೆ.ಬಾಲಕೃಷ್ಣ, ವಿಧಾನಸಭೆಯ ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಪಿ.ಬಾಂಡ್ ಗಣಪತಿ, ಕರ್ನಾಟಕ ರಾಜ್ಯ ಸಹಕಾರ ಹಾಪ್‍ಕಾಮ್ಸ್ ಹಾಗೂ ಕೊಡಗು ಜಿಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಬಿ.ಎ.ರಮೇಶ್ ಚಂಗಪ್ಪ, ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಎನ್.ಎ.ರವಿ ಬಸಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಕನ್ನಂಡ ಸಂಪತ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಇತರರು ಪಾಲ್ಗೊಳ್ಳಲಿದ್ದಾರೆ.









