ಸುಂಟಿಕೊಪ್ಪ ನ.15 : ಬ್ಯಾಂಕಾಕ್ ನಲ್ಲಿ ನಡೆದ ಅಂತರ್ ರಾಷ್ಟ್ರೀಯ ಸೆಸ್ಟೋ ಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಚಾಪಿಯನ್ಸ್ ತಂಡವಾಗಿ ಹೊರಹೊಮ್ಮುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ.
ಶ್ರೀಲಂಕಾದ ರತ್ನಪುರದಲ್ಲಿ ನ. 9ರಿಂದ13ರವರೆಗೆ ನಡೆದ ಅಂತರಾಷ್ಟ್ರೀಯ ಸೆಸ್ಟೋ ಬಾಲ್ ಚಾಂಪಿಯನ್ ಶಿಪ್‌ನ ಭಾರತ ಪುರುಷರ ತಂಡದ ಥೈಲ್ಯಾಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ದ ಸೆಸ್ಟೋ ಬಾಲ್ ನಲ್ಲಿನ ತಮ್ಮ ಚಾಕಾಚಕ್ಯತೆಯನ್ನು ಪ್ರದರ್ಶಿಸಿ ದೇಶಕ್ಕೆ ಚಿನ್ನದ ಪದಕ ತಂದುಕೊಡುವಲ್ಲಿ ಯಶಸ್ವಿಯಾಗಿ ಕ್ರೀಡಾ ಜಿಲ್ಲೆ ಎನಿಸಿರುವ ಕೊಡಗಿಗೆ ಕೀರ್ತಿ ತಂದಿದ್ದಾರೆ. ಈ ಪಂದ್ಯಾವಳಿಯಲ್ಲಿ ಶಾಹಿಲ್ ಉಸ್ಮಾನ್ ಅವರು ಭಾರತ ತಂಡದ ಕ್ಯಾಪ್ಟನ್ ಆಗಿಯೂ ಕೂಡ ಕಾರ್ಯ ನಿರ್ವಹಿಸಿದ್ದು, ಸುಂಟಿಕೊಪ್ಪ ಗ್ರಾಮ ಪಂಚಾಯತಿಯ ಮಾಜಿ ಸದಸ್ಯರಾದ ಕೆ.ಎ. ಉಸ್ಮಾನ್ ರವರ ಪುತ್ರನಾಗಿದ್ದಾರೆ. ಇರ್ಷಾದ್ ಮುಸ್ತಾಫ ಅವರು ಅಂತರ್ ರಾಷ್ಟ್ರೀಯ ಚಾಂಪಿಯನ್ ಶಿಪ್‌ನಲ್ಲಿ ಬೆಸ್ಟ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್‌ಗೆ ಪಾತ್ರರಾಗಿದ್ದು ಇವರು ಸುಂಟಿಕೊಪ್ಪದ ದಿವಂಗತ ಜಾವಮನೆ ಮುಸ್ತಫಾರವರ ಪುತ್ರನಾಗಿದ್ದಾರೆ.
ಈ ಟೂರ್ನಮೆಂಟ್ ನಲ್ಲಿ ದೇಶಕ್ಕೆ ಬಂಗಾರದ ಪದಕಗಳನ್ನು ತಂದುಕೊಟ್ಟು ಕೊಡಗು ಜಿಲ್ಲೆಗೆ ಹೆಮ್ಮೆಯ ಗರಿ ಮೂಡಿಸಿರುವ ಶಾಹೀಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫ ಅವರಗಳು ಬುಧವಾರ ನವದೆಹಲಿಗೆ ಹಿಂತಿರುಗಿ ಬೆಂಗಳೂರಿನ ಮೂಲಕ ಕೊಡಗಿಗೆ ಆಗಮಿಸಿದರು. ಕೊಪ್ಪ ಗೇಟ್‌ಗೆ ತಲುಪುತ್ತಿದ್ದಂತೆ ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಆತ್ಮೀಯವಾಗಿ ಸ್ವಾಗತಿಸಿದರು. ಸುಂಟಿಕೊಪ್ಪಕ್ಕೆ ಆಗಮಿಸುತ್ತಿದ್ದಂತೆ ಅಯ್ಯಪ್ಪ ಸ್ವಾಮಿ ವೃತ್ತದ ಬಳಿ ಸಂಭ್ರಮದಿಂದ ಬರ ಮಾಡಿಕೊಳ್ಳಲಾಯಿತು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*