ಮಡಿಕೇರಿ ನ.16 : ನಗರದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 25ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ನ.15 ರ ಸಂಜೆಯಿಂದಲೇ ದೇವಾಲಯದಲ್ಲಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಇಂದು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು.
25ನೇ ಸಾರ್ಥಕತೆಯ ವಾರ್ಷಿಕೋತ್ಸವ ಪ್ರಯುಕ್ತ ದೇವರಿಗೆ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮುಖವಾಡವನ್ನು ಅರ್ಪಿಸಲಾಯಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.





































