ಚಿತ್ರದುರ್ಗ ನ.16 : ಲೈಂಗಿಕ ದೌರ್ಜನ್ಯದ ಆರೋಪದಡಿ ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದು, ಚಿತ್ರದುರ್ಗ ಜಿಲ್ಲೆ ಪ್ರವೇಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದೆ ಎಂದು ತಿಳಿದು ಬಂದಿದೆ.









