ಮಡಿಕೇರಿ ನ.16 : ಶ್ರೀ ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ನ.19 ರಂದು ದಕ್ಷಿಣ ಕೊಡಗಿನ ಮಾಯಮುಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ದ್ವಿತೀಯ ವರ್ಷದ ‘ಬೊಡಿ ನಮ್ಮೆ’ಯನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಸಣ್ಣುವಂಡ ರಮೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ವಂಶಿ ಮಾರ್ಲ ಮತ್ತು ಜೆ.ಕೆ. ಟೈಯರ್ಸ್ ಪ್ರಾಯೋಜಕತ್ವದಲ್ಲಿ ನಡೆಯುವ ಬೊಡಿ ನಮ್ಮೆ ಇಲ್ಲವೆ ಬಂದೂಕಿನಿಂದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ 12 ಬೋರ್, .22 ಮತ್ತು ಏರ್ ಗನ್ ಸೇರಿದಂತೆ ಮೂರು ವಿಭಾಗಗಲ್ಲಿ ನಡೆಯಲಿದೆ. ಇದರಲ್ಲಿ ಇನ್ನೂರ ಐವತ್ತಕ್ಕೂ ಹೆಚ್ಚಿನ ಸ್ಪರ್ಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ಹೇಳಿದರು.
ಸ್ಪರ್ಧೆಯ .22 ವಿಭಾಗ 50 ಮೀಟರ್ ಅಂತರದ ಗುರಿಯನ್ನು ಮತ್ತು 12 ಬೋರ್ ವಿಭಾಗ 30 ಮೀಟರ್ ಅಂತರದ ಗುರಿಯನ್ನು ಹೊಂದಿದ್ದು, ಇವೆರಡು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗಳಾಗಿವೆ. ಏರ್ ಗನ್ ವಿಭಾಗ 15 ಮಿಟರ್ ಅಂತರದ ಗುರಿಯನ್ನು ಹೊಂದಿದ್ದು, ಇದು ಮೊಟ್ಟೆಗೆ ಗುಂಡು ಹೊಡೆಯುವ ಸ್ಪರ್ಧೆಯಾಗಿರುತ್ತದೆ. ಈ ಮೂರು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ ಎಂದರು.
ಸ್ಪರ್ಧೆಯ 12 ಬೋರ್ ಮತ್ತು .22 ವಿಭಾಗಗಳಲ್ಲಿ ಸ್ಪರ್ಧಿಸುವವರಿಗೆ ಪ್ರವೇಶ ಶುಲ್ಕ 200 ರೂ., ಏರ್ ಗನ್ ವಿಭಾಗಕ್ಕೆ 100 ರೂ. ನಿಗದಿಪಡಿಸಲಾಗಿದೆ. ಸ್ಪರ್ಧಿಗಳು ಸ್ಪರ್ಧೆಯ ದಿನದಂದು ಮಧ್ಯಾಹ್ನ 12 ಗಂಟೆಯವರೆಗೆ ಪ್ರವೇಶ ಶುಲ್ಕ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
::: ಉದ್ಘಾಟನೆ :::
‘ಬೊಡಿ ನಮ್ಮೆ’ಯನ್ನು ನ.19 ರಂದು ಬೆಳಗ್ಗೆ 10 ಗಂಟೆಗೆ ವೈದ್ಯಾಧಿಕಾರಿ ಡಾ. ಬಲ್ಲನಮಾಡ ನಿಖಿಲ್ ನಂಜಪ್ಪ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಚಿರಿಯಪಂಡ ರಾಜಾ ನಂಜಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಹಿಳಾ ಬ್ಯಾಂಕ್‍ನ ಮಾಜಿ ಅಧ್ಯಕ್ಷರಾದ ಕಂಜಿತಂಡ ಸ್ವಾತಿ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ ಎಂದು ರಮೇಶ್ ತಿಳಿಸಿದರು.
“ಬೊಡಿ ನಮ್ಮೆ”ಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳಿಗೆ ವಿನು ಸಣ್ಣುವಂಡ ಮೊ.9902612333, ಪ್ರದೀಪ್ ಚೆಪ್ಪುಡಿರ ಮೊ.6362361219 ನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿಗೋಷ್ಠಿಯಲ್ಲಿ ಶ್ರೀ ಮಾನಿಲ್ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷರಾದ ಚೆಪ್ಪುಡಿರ ಪ್ರದೀಪ್ ಪೂವಯ್ಯ, ಸದಸ್ಯರಾದ ಆಪಟ್ಟೀರ ವೀಕ್ಷಿತ್ ಹಾಗೂ ಸಣ್ಣುವಂಡ ಸೋಮಣ್ಣ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*