ವಿರಾಜಪೇಟೆ ನ.16 : ಪ್ರತಿಯೊಬ್ಬರಲ್ಲೂ ಹಲವು ಪ್ರತಿಭೆಗಳಿದ್ದು, ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯವಾಗಿದೆ ಎಂದು ಸೆಂಟ್ ಆನ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆಗಳಲ್ಲಿ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲಾಗುತ್ತದೆ. ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕುವುದರಲ್ಲಿ ಪೋಷಕರು, ಶಿಕ್ಷಕರು ಮಹತ್ವವಾದ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸಬಹುದಾಗಿದೆ ಎಂದರು.
ಕಳೆದ 20 ವರ್ಷಗಳಿಂದ ಸರಕಾರ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. ಶಿಕ್ಷಕರು ಮಗುವಿನ ಪ್ರತಿಭೆಗೆ ಸಾಕ್ಷಿಭೂತರಾಗಿದ್ದಾರೆ. ವಿವಿಧ ಸ್ಫರ್ದೆಗಳಲ್ಲಿ ಬಹುಮಾನ ಬರುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿದೆ ಎಂದು ಹೇಳಿದರು.
ವಿರಾಜಪೇಟೆ ತಾಲೂಕು ತಹಶೀಲ್ದಾರ್ ಹೆಚ್.ಎನ್.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ತೊಡಗಬೇಕು. ಪ್ರತಿಯೊಂದು ಮಗುವು ಕಲೆ, ಸಂಗೀತ ಮತ್ತು ಚಿತ್ರಕಲೆ ಇಂತಹ ವಿಭಿನ್ನ ಕಲೆಗಳನ್ನು ಹೊಂದಿರುತ್ತದೆ ಇದನ್ನು ನಾವು ಪ್ರೋತ್ಸಾಹಿಸಿದಾಗ ಮಕ್ಕಳಲ್ಲಿನ ಪ್ರತಿಭೆ ಹೊರಹೊಮ್ಮಲಿದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂತಹ ಅವಕಾಶಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಸಹಕಾರಿಯಾಗಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವೇಷ ಭೂಷಣ ಸ್ಪರ್ಧೆಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವ ಕೆಲಸ ಶಿಕ್ಷಕರಿಂದ ಆಗಬೇಕು. ಮಕ್ಕಳು ದೇಶದ ಉತ್ತಮ ಪ್ರಜೆಯಾಗಲು ಶಿಕ್ಷಕರು ಮಾರ್ಗದರ್ಶಕರಾಗಬೇಕು ಎಂದರು.
ವೇದಿಕೆಯಲ್ಲಿ ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ, ಜಿಲ್ಲಾ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಪಿ.ಎ. ಪ್ರಭುಕುಮಾರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶೀ ಎ.ವಿ. ಮಂಜುನಾಥ್, ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ತಮ್ಮಯ್ಯ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಪಿ.ಎ. ಪ್ರವೀಣ್, ರಾಜ್ಯ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಜಿ. ಗಿಡ್ಡಯ್ಯ, ಪ್ರೌಡಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಉತ್ತಪ್ಪ, ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ತಮ್ಮಯ್ಯ ಎಸ್‍ಸಿ ಎಸ್‍ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷ ಟಿ.ಎಸ್ ಮಹೇಶ್ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಬಿಆರ್‍ಪಿಗಳಾದ ಗೀತಾಂಜಲಿ, ಮಾರ್ಗರೇಟ್, ಶುಶಾ, ಸಿಆರ್‍ಪಿ ವೆಂಕಟೇಶ್, ಸೇರಿದಂತೆ ಇಲಾಖೆಯವರು ಉಪಸ್ಥಿತರಿದ್ದರು.
ವಿರಾಜಪೇಟೆ ತಾಲೂಕಿನ 14 ಕ್ಲಸ್ಟರ್‍ಗೆ ಸೇರಿದ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸ್ದಿರು.
ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ ಸ್ವಾಗತಿಸಿದರು, ಸಿಆರ್‍ಪಿಗಳಾದ ಅನಿತಾ ಕುಮಾರಿ, ಕರುಂಬಯ್ಯ, ಜೀವನ್ ನಿರೂಪಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ ವಂದಿಸಿದರು. ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್ ಪ್ರಾರ್ಥಿಸಿದರು.
ಬೇರೆ ಬೇರೆ ವೇದಿಕೆಗಳಲ್ಲಿ ವೈಯುಕ್ತಿಕ ಸ್ಪರ್ಧೆ ಹಾಗೂ ಗುಂಪು ಸ್ಪರ್ಧೆಗಳು ನಡೆದವು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*