ಮಡಿಕೇರಿ ನ.16 : ಕರ್ನಾಟಕ ಸಂಭ್ರಮ 50 ರ ಸಂಭ್ರಮದಲ್ಲಿ ಕನ್ನಡ ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಎಲ್ಲೆಡೆ ಪಸರಿಸಬೇಕಿದೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಹೇಳಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೊಡಗು ಗೌಡ ಮಹಿಳಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರೋತ್ಸವ ಅಮೃತೋತ್ಸವದ ಸವಿನೆನಪು ಸಾಂಸ್ಕೃತಿಕ ಕಾರ್ಯಕ್ರಮವು ಕೊಡಗು ಗೌಡ ಸಮಾಜದಲ್ಲಿ ನಡೆಯಿತು.
ಗಡಿಯಲ್ಲಿ ಕನ್ನಡ ನುಡಿ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದಲ್ಲಿ ಮಹಿಳೆಯರ ಪಾತ್ರ ಮುಖ್ಯವಾದುದು. ಕೊಡಗು ಗೌಡ ಮಹಿಳಾ ಒಕ್ಕೂಟ ಈ ಒಂದು ಕಾರ್ಯವನ್ನು ಯಶಸ್ವಿಯಾಗಿ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಿವೃತ್ತ ಪ್ರಾಂಶುಪಾಲ ಹಾಗೂ ಹಿರಿಯ ಸಾಹಿತಿ ಬಾರಿಯಂಡ ಜೋಯಪ್ಪ ಅವರು ಮಾತನಾಡಿ ಭಾರತ ಅಮೃತೋತ್ಸವದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯಲ್ಲಿ ನಾವಿದ್ದೇವೆ. ಇಂತಹ ಸಂದರ್ಭಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸುವ ಕಾರ್ಯವಾಗುತ್ತಿದೆ. ಕನ್ನಡಿಗರಾದ ನಾವುಗಳು ಸೂಕ್ಷ್ಮ ಮನಸ್ಸಿನವರಾಗಿದ್ದು, ಶಾಂತಿಯೊಂದಿಗೆ ಎಲ್ಲರಲ್ಲೂ ಸಮಾನತೆಯನ್ನು ಕಾಣುವವರು. ಸಾಮನ್ಯವಾಗಿ ಗಡಿಪ್ರದೇಶವನ್ನು ನಾವುಗಳು ಶ್ರೀಮಂತ ಪ್ರದೇಶವೆಂದು ತಿಳಿದಿದ್ದೇವೆ ಎಂದರು.
ನಿವೃತ್ತ ಪ್ರಾಂಶುಪಾಲರಾದ ಕೊಂಬಾರನ ಕುಂತಿ ಬೋಪಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಆರು ಗಡಿ ಪ್ರದೇಶಗಳನ್ನು ಹೊಂದಿದ್ದು, ಅಲ್ಲಿನ ಗ್ರಾಮಗಳು ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಕನ್ನಡಿಗರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಸಮಸ್ಯೆಗಳನ್ನು ಪೂರೈಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.
ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿವರ್ಗ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗಡಿನಾಡ ಕನ್ನಡಿಗರು ಬಹು ಸಂಸ್ಕೃತಿಯವರಾಗಿದ್ದು, ಕರ್ನಾಟಕದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲರಲ್ಲೂ ಕನ್ನಡದ ಪ್ರಜ್ಞೆ ಮೊಳಗಲಿ ಎಂದು ಹೇಳಿದರು.
ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಅವರು ಮಾತನಾಡಿ ಗಡಿ ಪ್ರದೇಶಗಳಲ್ಲಿ ಕನ್ನಡದ ಪ್ರೇಮಿಗಳಿದ್ದಾರೆ. ಕನ್ನಡ ಕಾರ್ಯಕ್ರಮಗಳಲ್ಲಿ ನಾವುಗಳು ಭಾಗವಹಿಸಬೇಕು ಎಂದು ಹೇಳಿದರು.
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಶ್ ಮಾತನಾಡಿ ಕಲೆ, ಸಾಹಿತ್ಯ, ಸಂಸ್ಕೃತಿಗೆ ಯಾವುದೇ ಜಾತಿ, ಭಾಷೆ, ಧರ್ಮದ ಪರಿಮಿತಿಯಿಲ್ಲ. ಎಲ್ಲವನ್ನೂ ಮೀರಿದ ಎಲ್ಲರನ್ನೂ ಒಂದುಗೂಡಿಸುವ ಶಕ್ತಿ ಅವುಗಳಿಗೆ ಇದೆ. ನಮ್ಮೊಳಗಡಗಿರುವ ಪ್ರತಿಭೆಗಳನ್ನು ಹೊರಹಾಕುವ ಒಂದು ಕಾಯಕವಷ್ಟೇ ಎಂದು ಹೇಳಿದರು.
ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜನರ ಭಾಗವಹಿಸುವಿಕೆ ವಿರಳವಾಗಿದೆ. ಅಂತಹದರಲ್ಲಿ ಮಹಿಳಾ ಒಕ್ಕೂಟದವರ ಶ್ರಮ ಶ್ಲಾಘನೀಯ. ಕಲಾವಿದರು ಕೇವಲ ವೇದಿಕೆ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಿರದೆ, ನಿರಂತರವಾಗಿ ಕಲಾಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ನಾಡು, ನುಡಿ ಕಟ್ಟುವ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡುವಂತೆ ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಅಮೆ ದಮಯಂತಿ ಪ್ರಾಸ್ತಾವಿಕವಾಗಿ ಮಾತನಾಡಿ ಗಡಿ ಅಭಿವೃದ್ಧಿ ಪ್ರಾಧಿಕಾರ ಈ ಜವಾಬ್ದಾರಿಯನ್ನು ಒಕ್ಕೂಟಕ್ಕೆ ನೀಡಿದ್ದು, ಕಳೆದ ಸಾಲಿನಲ್ಲಿಯೇ ನಡೆಸಬೇಕಾಗಿತ್ತು. ಕೋವಿಡ್, ಇನ್ನಿತರ ಕಾರಣಗಳಿಂದ ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ನವೆಂಬರ್ ತಿಂಗಳಲ್ಲಿ ಆಚರಿಸಲಾಗಿದೆ. ಒಕ್ಕೂಟದಿಂದ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶ ಹೊಂದಿದ್ದು, ಎಲ್ಲರೂ ಸಹಕಾರ ನೀಡುವಂತೆ ಕೋರಿದರು.
ಇದೇ ಸಂದರ್ಭ ಒಕ್ಕೂಟದ ನಿರ್ದೇಶಕಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ವಿಜೇತರಾದ ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ. ಒಕ್ಕೂಟದ ನಿರ್ದೇಶಕರುಗಳಾದ ಪೇರಿಯನ ಮುತ್ತಮ್ಮ, ಕಡ್ಲೇರ ಆಶಾಪ್ರಭು, ಬೈತಡ್ಕ ಜಾನಕಿ ಬೆಳ್ಯಪ್ಪ, ಇತರರು ಪಾಲ್ಗೊಂಡಿದ್ದರು.
ಮಹಿಳಾ ಒಕ್ಕೂಟದ ಸದಸ್ಯರುಗಳು ನಾಡಗೀತೆ ಹಾಡಿದರು. ಬಾರನ ಶೋಭಾ ಹಾಗೂ ಕಟ್ರತನ ಲಲಿತ ಅಯ್ಯಣ್ಣ ಕಾರ್ಯಕ್ರಮ ನಿರೂಪಿಸಿದರು. ದೇಲಂಪಾಡಿ ರಮ್ಯ ಸನ್ಮಾನಿತರ ಪರಿಚಯ ಮಾಡಿದರು. ಒಕ್ಕೂಟದ ಸ್ಥಾಪಕ ಕಾರ್ಯದರ್ಶಿ ಕೂಡಕಂಡಿ ಕಾವೇರಮ್ಮ ವಂದಿಸಿದರು.
Breaking News
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*