ಮಡಿಕೇರಿ ನ.16 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಗರದ ರೆಡ್‍ಕ್ರಾಸ್ ಭವನದಲ್ಲಿ ಮಕ್ಕಳ ದಿನಾಚರಣೆ ಮತ್ತು ಅಂಗನವಾಡಿ ದಿನಾಚರಣೆ ನಡೆಯಿತು.
ರೋಟರಿ ಮಡಿಕೇರಿ ವುಡ್ಸ್ ಪ್ರಾಯೋಜಕತ್ವ” ನೀಡುವುದರೊಂದಿಗೆ ಸಕ್ರಿಯವಾಗಿ ಭಾಗವಹಿಸಿದ್ದು, ಸುಮಾರು 180 ಪುಟಾಣಿ ಮಕ್ಕಳಿಗೆ ಆಟಿಕೆಗಳು, ಸರ್ಟಿಫಿಕೇಟ್‍ಗಳು, ಡ್ರಾಯಿಂಗ್ ಪುಸ್ತಕಗಳು ಮತ್ತು ಬಹುಮಾನ ವಿತರಿಸಲಾಯಿತು. ಪುಟಾಣಿ ಮಕ್ಕಳಿಗೆ ಹಾಡು, ನೃತ್ಯ, ಸಣ್ಣ ಕತೆಗಳ ಸ್ಪರ್ಧೆ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವುಡ್ಸ್ ಅಧ್ಯಕ್ಷ ರೊ.ವಸಂತ್ ಕುಮಾರ್, ಮಕ್ಕಳ ದಿನಾಚರಣೆ ಮತ್ತು ಅಂಗನವಾಡಿ ದಿನವನ್ನು ಆಚರಣೆ ಮಾಡುವುದರ ಮೂಲಕ ಮಕ್ಕಳಿಗೆ ಖುಷಿಯ ವಾತಾವರಣವನ್ನು ಕಲ್ಪಿಸಿಕೊಡುವುದು ನಮ್ಮ ಜವಾಬ್ದಾರಿಯೂ ಆಗಿದೆ. ಪುಟಾಣಿ ಮಕ್ಕಳಲ್ಲಿ ಸದಭಿರುಚಿಯ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸಿ, ಸಮಾಜಕ್ಕೆ, ದೇಶಕ್ಕೆ ಒಳ್ಳೆಯ ಪ್ರಜೆಯನ್ನು ಕೊಡುವಲ್ಲಿ ಅಂಗನವಾಡಿಯೂ ಕೂಡ ಮಹತ್ತರ ಪಾತ್ರವಹಿಸಿದೆ ಎಂದರು.
ರೋಟರಿ ಸಂಸ್ಥೆಯು ಹಲವಾರು ವರ್ಷಗಳಿಂದ ಅಂಗನವಾಡಿ ಜೊತೆ ಗುರುತಿಸಿಕೊಂಡು ಇಂತಹ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ವಿಶೇಷವಾಗಿ ಈ ಸಾಲಿನಲ್ಲಿ ತನ್ನ ವಾರ್ಷಿಕ ಚಟುವಟಿಕೆಯಲ್ಲಿ ಅಂಗನವಾಡಿಗೆ ವಿಶೇಷ ಆಧ್ಯತೆ ನೀಡುತ್ತಿದೆ ಎಂದರು.
ರೆಡ್‍ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ, ಅಂಗನವಾಡಿ ಶಿಕ್ಷಕಿಯರ ಸೇವೆಯನ್ನು ಪ್ರಶಂಸಿಸಿದರು.
ರೊ. ಪ್ರವೀಣ್ ಕುಮಾರ್, ರೆಡ್‍ಕ್ರಾಸ್ ಸಭಾಪತಿಗಳಾದ ರೆಡ್‍ಕ್ರಾಸ್ ಕಾರ್ಯದರ್ಶಿ ಎಚ್.ಆರ್.ಮುರಳೀಧರ್, ಮಡಿಕೇರಿಯ ಲಯನ್ಸ್ ಕ್ಲಬ್ ನ ಲಯನ್ ಕನ್ನಂಡ ಕವಿತಾ, ಅಂಗನವಾಡಿ ಅಧಿಕಾರಿಗಳಾದ ಸವಿತಾ, ಮುತ್ತಮ್ಮ ಮತ್ತು ಮಡಿಕೇರಿ ನಗರದಲ್ಲಿರುವ ಎಲ್ಲಾ ಅಂಗನವಾಡಿ ಶಿಕ್ಷಕಿಯರು, ಸಹಾಯಕರು, ಪೋಷಕರು ಭಾಗವಹಿಸಿದ್ದರು. ಮಕ್ಕಳ ಪೋಷಕರು ಸೇರಿದಂತೆ ಸುಮಾರು 250 ಮಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*