ಮಡಿಕೇರಿ ನ.17 : ‘ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ’ಯ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಮಡಿಕೇರಿ ತಾಲೂಕಿನ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ 2023-24ನೇ ಸಾಲಿನ “ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ”ಗಳು ನವೆಂಬರ್, 20 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗುವ ಜನಪದ ಗೀತೆ, ಆಶುಭಾಷಣ, ಪ್ರಬಂಧ, ಸ್ಥಳದಲ್ಲೇ ಪಾಠೋಪಕರಣಗಳ ತಯಾರಿಕೆ, ಸ್ಥಳದಲ್ಲೇ ಚಿತ್ರ ಬರೆಯುವುದು, ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಶಿಕ್ಷಕರು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.
ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಬಹುದು. ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ. “ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ”ಯ ವತಿಯಿಂದ ಇದುವರೆವಿಗೆ ನಡೆಸಲಾಗಿರುವ ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ, ಯಾವುದೇ ಶಿಕ್ಷಕರು ಒಂದು ಬಾರಿಯಾದರೂ ಪ್ರಥಮ ಸ್ಥಾನ ಗಳಿಸಿದ್ದಲ್ಲಿ, ಅದೇ ಶಿಕ್ಷಕರು ಪುನಃ, ಅದೇ ಸ್ಪರ್ಧೆಯಲ್ಲಿ ತಾಲ್ಲೂಕು ಮಟ್ಟದಿಂದ ರಾಜ್ಯಮಟ್ಟದವರೆಗೆ ಭಾಗವಹಿಸಲು ಅವಕಾಶವಿರುವುದಿಲ್ಲ ಮತ್ತು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧೆಯನ್ನು ಹೊರತುಪಡಿಸಿ ಬೇರೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ತಿಳಿಸಿದ್ದಾರೆ.
Breaking News
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*