ಮಡಿಕೇರಿ ನ.17 : ದೇಶದ ಅಭಿವೃದ್ಧಿಗೆ ಸರ್ಕಾರಿ ಕ್ಷೇತ್ರದ ಜೊತೆಗೆ ಸಹಕಾರಿ ಮತ್ತು ಖಾಸಗಿ ಕ್ಷೇತ್ರದ ಪಾಲು ದೊಡ್ಡದಿದ್ದು, ಈ ಮೂರು ಕ್ಷೇತ್ರಗಳ ಹೊಂದಾಣಿಕೆ ಕಾರ್ಯನಿರ್ವಹಣೆಯಿಂದ ದೇಶವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯ ಎಂದು ಸಹಕಾರ ಸಂಘಗಳ ಉಪನಿಬಂಧಕರಾದ ಎಂ.ಎಸ್. ಎಸ್. ಕೃಷ್ಣ ಪ್ರಸಾದ್ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ’ ದಿನಾಚರಣೆಯನ್ನು ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.
ಸಹಕಾರ ಇಲಾಖೆಯು ಸಹಕಾರ ಕ್ಷೇತ್ರದ ಕಾರ್ಯಚಟುವಟಿಕೆಗಳನ್ನು ನಿಯಂತ್ರಣದಲ್ಲಿಡಲು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಲು, ಸಹಕಾರ ಸಂಘಗಳ ಮೇಲ್ವಿಚಾರಣೆಯಂತಹ ಕೆಲಸ ನಿರ್ವಹಿಸುತ್ತದೆ. ಸಹಕಾರ ಕ್ಷೇತ್ರದಲ್ಲಿ ಖಾಸಗಿ ಮತ್ತು ಸರ್ಕಾರದ ಪಾಲುದಾರಿಕೆ ಅಗಾಧವಾಗಿದೆ. ಸಹಕಾರ ಕ್ಷೇತ್ರದ ಕಾರ್ಯವ್ಯಾಪ್ತಿಯನ್ನು ಅರಿತು ಕೇಂದ್ರ ಸರ್ಕಾರವು 13 ಅಂಶಗಳ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ಸ್ಥಳೀಯ ಸಹಕಾರ ಸಂಘಗಳ ಮೂಲಕ ಕುಡಿಯುವ ನೀರಿನ ಘಟಕ ಸ್ಥಾಪನೆ, ಗೋದಾಮು ನಿರ್ಮಾಣ, ಪೆಟ್ರೋಲ್ ಬಂಕ್ ಸ್ಥಾಪನೆ, ಜನೌಷಧಿ ಕೇಂದ್ರ ಸ್ಥಾಪನೆ ಇತ್ಯಾದಿ ಹಲವು ಉತ್ತಮ ಯೋಜನೆ ಕೈಗೊಳ್ಳುವಂತೆ ಉತ್ತೇಜಿಸುತ್ತಿದೆ. ಆದ್ದರಿಂದ ಪ್ರತಿಯೊಂದು ಸಹಕಾರ ಸಂಘಗಳು ತಮ್ಮ ಆದಾಯ ವೃದ್ಧಿಯ ಕಡೆಗೆ ಹಾಗೂ ತಮ್ಮ ಉದ್ದೇಶದ ರೀತ್ಯಾ ಸಾಮಾಜಿಕ ಕಳಕಳಿಯಂತಹ ಕ್ರಮವನ್ನು ಕೈಗೊಂಡು ದೇಶವನ್ನು ಪ್ರಗತಿಯ ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಸಹಕಾರಿಗಳು ಹಾಗೂ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಕೆ.ಕೆ.ಪೂರ್ಣಯ್ಯ ಹಾಗೂ ಎಂ.ಪಿ. ಕೃಷ್ಣರಾಜು ಅವರನ್ನು ಸನ್ಮಾನಿಸಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಅನೇಕ ಹಿರಿಯ ಸಹಕಾರಿಗಳಿದ್ದು ಅವರ ನಿಸ್ವಾರ್ಥ ಸೇವೆ ಅನುಕರಣೀಯ ಹಾಗೂ ಶಾಶ್ವತ ಜ್ಞಾಪನೆ ಇಟ್ಟುಕೊಳ್ಳುವಂತಹುದು. ಹಲವು ಹಿರಿಯ ಸಹಕಾರಿಗಳು ತಮ್ಮ ಸ್ವಂತ ಜಾಗವನ್ನು ಸಂಘಕ್ಕಾಗಿ ದಾನ ನೀಡಿದ್ದು ಅವರ ಆ ದಾನದ ಫಲವಾಗಿಯೇ ಜಿಲ್ಲೆಯಲ್ಲಿ ಹಲವು ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. 1905 ರಲ್ಲಿ ಗದಗಿನ ಕಣಗಿನಹಾಳ ಗ್ರಾಮದಲ್ಲಿ ಶಿದ್ದನಗೌಡ ಸಂಣರಾಮನಗೌಡ ಪಾಟೀಲರು ಪ್ರಪ್ರಥಮ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವುದರ ಮೂಲಕ ಪ್ರಾರಂಭಗೊಂಡ ಕ್ರಾಂತಿ ಇಂದು ಎಲ್ಲಾ ವಿಧಧ ಸಹಕಾರ ಸಂಘವನ್ನು ಸ್ಥಾಪಿಸುವಷ್ಟರ ಮಟ್ಟಿಗೆ ಬೆಳೆದಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು 1905 ರಲ್ಲಿಯೇ ಶಾಂತಳ್ಳಿಯ ತಲ್ತರೆ ಶೆಟ್ಟಳ್ಳಿಯಲ್ಲಿ ಪ್ರಥಮ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಿ ರೈತರ ಹಾಗೂ ಬಡವರ ಏಳಿಗೆಗಾಗಿ ಶ್ರಮಿಸಲಾಯಿತು ಎಂದರು.
ಸಹಕಾರ ಕ್ಷೇತ್ರದಲ್ಲಿ ಕೊಡಗಿನ ಪಿ.ಐ. ಬೆಳ್ಯಪ್ಪ, ಪಿ.ಎಂ. ಚಂಗಪ್ಪ, ಸಿ.ಎಂ. ಪೂಣಚ್ಚರವರ ಕೊಡುಗೆ ಅಪಾರ. ಅದರಲ್ಲೂ ಪಿ.ಐ. ಬೆಳ್ಯಪ್ಪರವರು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸ್ಥಾಪನೆಗೆ ಕಾರಣಿಕರ್ತರಾಗಿದ್ದರು ಎಂಬುದು ಗಮನಾರ್ಹ. ಸಹಕಾರ ಕ್ಷೇತ್ರದಿಂದ ರೈತರ, ಬಡವರ, ಶೋಷಿತರ ಏಳಿಗೆ ಸಾಧ್ಯ ಎಂಬುದನ್ನು ಮನಗಂಡ ಕೇಂದ್ರ ಸರ್ಕಾರವು ಸಹಕಾರ ಸಚಿವಾಲಯವನ್ನು ಪ್ರಾರಂಭಿಸಿ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಸುಮಾರು 900 ಕೋಟಿ ಮೊತ್ತವನ್ನು ಬಿಡುಗಡೆಗೊಳಿಸಲಾಗಿದೆ. ಪ್ರಸ್ತುತ ಭಾರತದ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದ್ದು, 5 ಟ್ರಿಲಿಯನ್ ಡಾಲರ್‍ಗೆ ತಲುಪಿಸುವ ಗುರಿಯನ್ನು ಹೊಂದಲಾಗಿದೆ. ಈ ದಿಸೆಯಲ್ಲಿಯೇ ಸಹಕಾರ ಕ್ಷೇತ್ರದ ಮೂಲಕ ಈ ಗುರಿಯನ್ನು ಸಾಧಿಸಲು ಪ್ರಯತ್ನಿಸಲಾಗುತ್ತಿದೆ. ಗ್ರಾಮ ಮಟ್ಟದ ಸಹಕಾರ ಸಂಘಗಳನ್ನು ಶಕ್ತಿ ಕೇಂದ್ರಗಳಾಗಿ ಪರಿವರ್ತನೆ ಮಾಡುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತೆಯೇ ಜಿಲ್ಲಾ ಸಹಕಾರ ಯೂನಿಯನ್ ಸಹ ಸರ್ಕಾರದ ಯೋಜನೆಗಳನ್ನು ಸಹಕಾರ ಸಂಘಗಳಿಗೆ ಶಿಕ್ಷಣ ಕಾರ್ಯಕ್ರಮಗಳ ಮೂಲಕ ತಲುಪಿಸುವ ಕಾರ್ಯ ನಿರ್ವಹಿಸುತ್ತಿದೆ. ಸಂಘಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ತಾಂತ್ರಿಕತೆಯಲ್ಲಿ ತಮ್ಮನ್ನು ತಾವು ನುರಿತರನ್ನಾಗಿಸಿಕೊಳ್ಳಬೇಕು. ಭಾರತವು ಜಪಾನ್‍ನಂತಹ ದೇಶವನ್ನು ಹಿಂದಿಕ್ಕಿ ಮುಂದೆ ಸಾಗಲು ನಾವುಗಳೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‍ನ ನಿರ್ದೇಶಕ ಕನ್ನಂಡ ಸಂಪತ್ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಸಲ್ಲದು. ಹಿರಿಯ ಸಹಕಾರಿಗಳ ಸೇವಾ ಮನೋಭಾವ, ತ್ಯಾಗದ ಫಲಪ್ರದವಾಗಿಯೇ ಹಲವಷ್ಟು ಸಂಘಗಳು ಇಂದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಈ ದಿಸೆಯಲ್ಲಿ ಕೆ.ಕೆ. ಪೂರ್ಣಯ್ಯರವರು ಬ್ಯಾಂಕಿನ ಏಳ್ಗೆಗಾಗಿ ದುಡಿದ ಪರಿಣಾಮವೇ ಇಂದು ಬ್ಯಾಂಕ್ ಪ್ರತಿಷ್ಟಿತ ಸಹಕಾರ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದ ಅವರು, ನಾವುಗಳೆಲ್ಲರೂ ಸಹಕಾರ ಸಂಘದ ಪ್ರಗತಿಗೆ ಕಾರಣಿಕರ್ತರಾಗುವ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ದಿನದ ಮಹತ್ವದ ಕುರಿತು ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ. ಶ್ಯಾಮಲಾ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಸಿ.ಕೆ. ಬಾಲಕೃಷ್ಣ ಬ್ಯಾಂಕ್ ಬೆಳೆದು ಬಂದ ದಾರಿಯ ಕುರಿತು, ಬ್ಯಾಂಕಿನ ಪ್ರಗತಿ ಕುರಿತು ಹಾಗೂ ಪ್ರಸ್ತುತ ಡಿಜಿಟಲೀಕರಣದ ಮಹತ್ವ, ಸಿಬ್ಬಂದಿಗಳ ಪರಿಶ್ರಮ-ಭಾಗವಹಿಸುವಿಕೆ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಬಿ.ಎ. ರಮೇಶ್ ಚಂಗಪ್ಪ, ಎನ್.ಎ. ರವಿ ಬಸಪ್ಪ, ಕೆ.ಎಂ. ತಮ್ಮಯ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತವನ್ನು ಬ್ಯಾಂಕಿನ ಉಪಾಧ್ಯಕ್ಷ ಬಿ.ಎಂ. ರಾಜೇಶ್ ನಡೆಸಿದರೆ, ಪ್ರಾರ್ಥನೆಯನ್ನು ಬ್ಯಾಂಕಿನ ಸಿಬ್ಬಂದಿ ಸುಬ್ರಮಣಿ, ನಿರೂಪಣೆ ಯೂನಿಯನ್ ವ್ಯವಸ್ಥಾಪಕಿ ಆರ್.ಮಂಜುಳ ನಡೆಸಿದರು. ಕಾರ್ಯಕ್ರಮದ ನಿರ್ವಹಣೆಗೆ ಬ್ಯಾಂಕಿನ ವ್ಯವಸ್ಥಾಪಕ ಪದ್ಮನಾಭ ಕಿಣಿ, ಮಹೇಶ್ ಹಾಗೂ ಸಿಬ್ಬಂದಿ ವರ್ಗ ಮತ್ತು ಯೂನಿಯನ್ ಸಿಬ್ಬಂದಿ ಬಿ.ಸಿ. ಅರುಣ್ ಕುಮಾರ್, ಸುರೇಶ್ ಸಹಕರಿಸಿದರು. ಬ್ಯಾಂಕಿನ ನಿರ್ದೇಶಕ ಸತೀಶ್ ಪೈ ವಂದಿಸಿದರು.
Breaking News
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*