ವಿರಾಜಪೇಟೆ ನ.17 : ವಿರಾಜಪೇಟೆ ವಲಯ ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನದರ್ಶನ ಪ್ರವಾಸ ಕಾರ್ಯಕ್ರಮ ನಡೆಯಿತು.
ವಿರಾಜಪೇಟೆಯ ಜಯಪ್ರಕಾಶ್ ನಾರಾಯಣ ಪ್ರೌಢಶಾಲೆ ವಿದ್ಯಾರ್ಥಿಗಳು ನಾಗರಹೊಳೆ ಹಾಗೂ ಮತ್ತಿಗೋಡು, ತಿತಿಮತಿ ಆನೆ ಕೇಂದ್ರಗಳಿಗೆ ಭೇಟಿ ಸಸಿಗಳ ಪೋಷಣೆ, ಬೆಳವಣಿಗೆ ಹಾಗೂ ಅವುಗಳ ಮಹತ್ವದ ಕುರಿತು ಮಾಹಿತಿ ಪಡೆದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್. ಲಾಲ್ ಕುಮಾರ್, ವಲಯ ಅರಣ್ಯ ಅಧಿಕಾರಿ ಕಚೇರಿಯ ಸಿಬ್ಬಂದಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.







