ಮಡಿಕೇರಿ ನ.17 : ಅರೆಸೇನಾ ಪಡೆಯ ಕೊಡಗು ಜಿಲ್ಲಾ ನಿವೃತ್ತ (ಮಾಜಿ) ಯೋಧರ ಒಕ್ಕೂಟದ 11ನೇ ವಾರ್ಷಿಕ ಮಹಾಸಭೆ ನ.21 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಒಕ್ಕೂಟದ ಕಾರ್ಯದರ್ಶಿ ಎನ್.ಎಂ.ಭೀಮಯ್ಯ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಒಕ್ಕೂಟದ ಅಧ್ಯಕ್ಷ ಎಂ.ಜಿ.ಯತೀಶ್ ಅವರ ಅಧ್ಯಕ್ಷತೆಯಲ್ಲಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದ ಬಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಸಭೆ ನಡೆಯಲಿದೆ. ಜಿಲ್ಲೆಯ ಅರೆಸೇನಾ ಪಡೆಯ ಮಾಜಿ ಯೋಧರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಎಂ.ಭೀಮಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.









