ಮಡಿಕೇರಿ ನ.17 : ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಮೂರು ರಾಷ್ಟçಗಳಾದ ಬ್ಯಾಂಕಾಕ್, ಥೈಲ್ಯಾಂಡ್ ಮತ್ತು ಶ್ರೀಲಂಕಾ ನಡುವಿನ ಅಂತರರಾಷ್ಟ್ರೀಯ ಸೆಸ್ಟೋಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ನಾಗಿ ಹೊರಹೊಮ್ಮಿದ ಭಾರತ ತಂಡಕ್ಕೆ ಚಿನ್ನದ ಪದಕ ಗಳಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತ ಸೆಸ್ಟೋಬಾಲ್ ತಂಡದ ನಾಯಕ, ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿ ಮಹಮ್ಮದ್ ಶಾಹಿಲ್ ಉಸ್ಮಾನ್ ಅವರನ್ನು ಕಾಲೇಜ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ದ್ವಿತೀಯ ಬಿಬಿಎ ವಿದ್ಯಾರ್ಥಿಯಾಗಿರುವ ಮಹಮ್ಮದ್ ಶಾಹಿಲ್ ಉಸ್ಮಾನ್ ರ ಕ್ರೀಡಾ ಸಾಧನೆಯ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಸಂಘದ ಸಂಚಾಲಕ ತಳವಾರ ಬಿ.ಹೆಚ್, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣ ಎಂ.ಪಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ತಿಪ್ಪೇಸ್ವಾಮಿ ಈ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಮಹದೇವಯ್ಯ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶೈಲಶ್ರೀ, ಇಂಗ್ಲೀಷ್ ವಿಭಾಗದ ಸಹಾಯ ಪ್ರಾಧ್ಯಾಪಕ ಅಲೋಕ್ ಬಿಜೈ, ದೈಹಿಕ ಶಿಕ್ಷಣ ವಿಭಾಗದ ರಮೇಶ್ ಹಾಗೂ ಮಹಮ್ಮದ್ ಶಾಹಿಲ್ ಅವರ ತಂದೆ ಉಸ್ಮಾನ್ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*