ಮಡಿಕೇರಿ ನ.17 : ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಸೋಮವಾರಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂಎಸ್ಸಿ(ಕೃಷಿ/ತೋಟಗಾರಿಕೆ/ಮೀನುಗಾರಿಕೆ/ ಅರಣ್ಯ/ ರೇಷ್ಮೆ) ಆಗಿರಬೇಕು. ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಮ್‍ಎಸ್ ಆಫೀಸ್‍ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ ವಯೋಮಿತಿ 45, ಮಾಸಿಕ ರೂ.30,000 ಗೌರವ ಧನ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಹರಿರುವ ಅಭ್ಯರ್ಥಿಗಳು ನವೆಂಬರ್, 24 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ(ಆತ್ಮ ವಿಭಾಗ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*