ಕುಶಾಲನಗರ ನ.17 : ವಿದ್ಯಾರ್ಥಿಗಳು ವ್ಯಾಸಾಂಗಕ್ಕೆ ನೀಡುವಷ್ಟೇ ಆದ್ಯತೆಯನ್ನು ಕ್ರೀಡೆಗಳಿಗೂ ಮೀಸಲಿಡಬೇಕು. ಆ ಮೂಲಕ ತಮ್ಮಲ್ಲಿನ ಪ್ರತಿಭೆಗಳನ್ನು ಹೊರ ಪ್ರದರ್ಶಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಯಾವುದೇ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಕೀಳರಿಮೆ, ಅಸಹನೆ, ಅತೃಪ್ತಿ ಎಂಬುದು ಹತ್ತಿರವೂ ಸುಳಿಯಲ್ಲ. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮಥ್ರ್ಯ ಹಾಗೂ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದು ಹೆಚ್.ಡಿ.ಕೋಟೆಯ ಸಂತ ಮೇರಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಹಾಗೂ ದೈಹಿಕ ಶಿಕ್ಷಣ ಸಾಧಕ ಅಂಥೋಣಿ ಪ್ರಭುರಾಜ್ ಹೇಳಿದರು.
ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಮಹಾನ್ ಪುರುಷರ ಜೀವನ ಹಾಗೂ ಸಾಧನೆಗಳು ಆದರ್ಶವಾಗಬೇಕಿದೆ. ಹಾಗೆಯೇ ಕುಶಾಲನಗರದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯನ್ನು ಕಟ್ಟಿ ಬೆಳೆಸುತ್ತಿರುವ ಸಂಸ್ಥೆಯ ಅಧ್ಯಕ್ಷ ಶಂಭುಲಿಂಗಪ್ಪ ಅವರ ಪರಿಶ್ರಮ ಹಾಗೂ ಸಾಧನೆಯನ್ನು ಪ್ರಭುರಾಜ್ ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಮಕ್ಕಳ ವ್ಯಾಸಾಂಗಕ್ಕೆ ನೀಡುವಷ್ಟೇ ಆದ್ಯತೆಯನ್ನು ಮಕ್ಕಳಲ್ಲಿ ಅಡಗಿರುವ ಸುಪ್ತವಾದ ಪ್ರತಿಭೆಗಳನ್ನು ಹೊರತರುವ ಪ್ರಾಮಾಣಿಕ ಪ್ರಯತ್ನವಾಗುತ್ತಿದೆ. ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸನ್ನಡತೆ ಜಾಗೂ ಸಂಯಮವನ್ನು ಕಲಿಸುತ್ತದೆ ಎಂದರು.
ಕಣಿವೆ ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್ ಹಾಗೂ ಪ್ರಭುರಾಜ್ ಅವರ ಸಾಧನೆಗಳನ್ನು ಗೌರವಿಸಿ ಕ್ರೀಡಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಮಹಾತ್ಮ ಗಾಂಧಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ.ಲಿಖಿತಾ, ಕಛೇರಿ ಅಧೀಕ್ಷಕ ಎನ್.ಎನ್.ನಂಜಪ್ಪ, ಆಡಳಿತಾಧಿಕಾರಿ ಮಹೇಶ್ ಅಮೀನ್, ಉಪನ್ಯಾಸಕರಾದ ವಿಕ್ರಮ್, ಚಂದ್ರಶೇಖರ್, ಕಬಡ್ಡಿ ಆಟದ ತೀರ್ಪುಗಾರ ಕಾರ್ತಿಕ್ ಇತರರು ಇದ್ದರು.
ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಸ್ವಾಗತಿಸಿದರು. ಉಪನ್ಯಾಸಕಿ ಮೇರಿ ಪ್ರಿಯ ನಿರೂಪಿಸಿದರು.
ಕ್ರೀಡಾ ಶಿಕ್ಷಕ ದಿನೇಶ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಕ್ರೀಡಾ ಕೂಟಗಳು ಏರ್ಪಟ್ಟವು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*