ಮಡಿಕೇರಿ ನ.17 : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ಮಡಿಕೇರಿ ಮಲ್ಲಂಗಡ ಎಂ.ಎ ಬೆಳ್ಳಿಯಪ್ಪ ಸ್ಮರಣಾರ್ಥ ಮಡಿಕೇರಿಯಲ್ಲಿ ಮೂರುದಿನಗಳ ಕಾಲ ಆಯೋಜಿಸಿರುವ ‘ಕೂರ್ಗ್ ಚಾಂಪಿಯನ್ಸ್ ಕಪ್ – 2013 ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ ದೊರಕಿತು.
ಜನರಲ್ ತಿಮ್ಮಯ್ಯ ಟೇಬಲ್ ಟೆನ್ನಿಸ್ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಯವ ಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ, ಜನನಿ ಹೆಲ್ತ್ ಸೆಂಟರ್ ಮಾಲೀಕರಾದ ಡಾ.ನವೀನ್ ಹಾಗೂ ಡಾ.ರಾಜೇಶ್ವರಿ, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ ಹಾಗೂ ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ಸ್ಥಾಪಕಾಧ್ಯಕ್ಷ ಮಲ್ಲೆಂಗಡ ರಚನ್ ಪೆÇನ್ನಪ್ಪ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ವಿಸ್ಮಯಿ ಚಕ್ರವರ್ತಿ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕ್ರೀಡಾ ಕೂಟಗಳಿಗೆ ಮೊದಲಿನಿಂದಲೂ ಸಹಕರಿಸುತ್ತಾ ಬಂದಿದ್ದು, ಕೊಡಗಿನ ಮನೆಮನೆಯಲ್ಲೂ ಕ್ರೀಡಾ ಪಟುಗಳಿದ್ದಾರೆ ಅವರನ್ನು ಗುರುತಿಸಿ ಸರಿಯಾಗಿ ಅವಕಾಶ ಕಲ್ಪಿಸಿದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ನಾಡಿನ ಕ್ರೀಡಾಪಟುಗಳು ಸಾಧಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚು ಕ್ರೀಡಾ ಕೂಟಗಳ ಆಯೋಜನೆ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಡಾ. ನವೀನ್ ಮಾತನಾಡಿ, ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಬಹಳ ಮುಖ್ಯ ಕ್ರೀಡೆಗೆ ಒತ್ತು ನೀಡುವುದು ನಮ್ಮೆಲ್ಲರ ಕರ್ತವ್ಯ ಈ ನಿಟ್ಟಿನಲ್ಲಿ ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಡಾ.ರಾಜೇಶ್ವರಿ ಮಾತನಾಡಿ, ಫಿಟ್ನೆಸ್ ಕಾಯ್ದುಕೊಂಡು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ. ಆ ನಿಟ್ಟಿನಲ್ಲಿ ಎಚ್ಚರವಹಿಸಿ ಗೆಲುವು ಸೋಲಿಗಿಂತ ಕ್ರೀಡಾ ಸ್ಫೂರ್ತಿ ಮುಖ್ಯ ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.
ಅಂತರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರ್ತಿ ಹಾಗೂ ಕೋಚ್ ತಾತಪಂಡ ಜ್ಯೋತಿ ಸೋಮಯ್ಯ ಮಾತನಾಡಿ, ತಮ್ಮ ಕ್ರೀಡಾ ಜೀವನದ ಹಲವು ಏಳು ಬೀಳುಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಬೇಕಾದ ಅಗತ್ಯ ಸಿದ್ಧತೆ, ತರಬೇತಿಗಳ ಗಳ ಕುರಿತು ಮಾಹಿತಿ ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕ್ರೀಡಾ ಪಟುಗಳಿಗೆ ಸಲಹೆ ನೀಡಿದರು.
ಕ್ರೀಡಾಕೂಟದ ಆಯೋಜಕ ಹಾಗೂ ಅಸೋಸಿಯೇಷನ್ ನ ಸ್ಥಾಪಕ ರಚನ್ ಪೊನ್ನಪ್ಪ ಟೇಬಲ್ ಟೆನ್ನಿಸ್ ಆಟಗಾರರಿಗೆ ಸರಿಯಾದ ವೇದಿಕೆ ಕಲ್ಪಿಸಿಕೊಡುವುದು ಅಸೋಷಿಯೇಷನ್‍ನ ಮೂಲ ಉದ್ದೇಶ. ಎಂದರು.
ವೇದಿಕೆಯಲ್ಲಿ ಕ್ರೀಡಾಕೂಟದ ಆಯೋಜಕ ಡೆರಿಕ್ ಡಿಸೋಜ ಉಪಸ್ಥಿತರಿದ್ದರು. ಕಾರ್ಯಕ್ರಮದ ಮೊದಲಿಗೆ ಜಿ.ಎಂ.ಪಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪತ್ರಕರ್ತ ರಂಜಿತ್ ಕವಲಪಾರ ಕಾರ್ಯಕ್ರಮ ನಿರೂಪಿಸಿದರು.