ಸುಂಟಿಕೊಪ್ಪ ನ.17 : ಲಾರಿ ಹಾಗೂ ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಗದ್ದೆಹಳ್ಳದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿಗೆ ಬರುತ್ತಿದ್ದ ಓಮ್ನಿ ಹಾಗೂ ಮಡಿಕೇರಿಯಿಂದ ಸುಂಟಿಕೊಪ್ಪದ ಕಡೆಗೆ ತೆರಳುತ್ತಿದ್ದ ಲಾರಿ ಗದ್ದೆಹಳ್ಳದ ತಿರುವಿನಲ್ಲಿ ಡಿಕ್ಕಿಯಾಗಿದೆ. ಘಟನೆಯಿಂದ ಓಮ್ನಿಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.












