ಮಡಿಕೇರಿ ನ.18 : ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಜನಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದರ ನೈತಿಕ ಹೊಣೆ ಹೊತ್ತು ನಗರಸಭಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಗರಸಭೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸದಸ್ಯರುಗಳು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭಾ ಸದಸ್ಯ ಹಾಗೂ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಅವರು, ನಗರಸಭಾ ಅಧ್ಯಕ್ಷರು ತಮಗೆ ದೊರೆತ್ತಿರುವ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ತಮ್ಮ ಹಿತಕ್ಕಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಯೇ ಹೊರತು ನಗರದ ಅಭಿವೃದ್ಧಿಗಾಗಿ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಮತ್ತು ಜನಪರ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದರು.
ಅಧ್ಯಕ್ಷರು ನಗರದ ಜನರ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ, ಸರ್ಕಾರದಿಂದ ವಿಶೇಷ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಇವರ ಅಸಮರ್ಥ ಆಡಳಿತದಿಂದಾಗಿ ನಗರೋತ್ಥಾನದ ಮೂರನೇ ಹಂತದ ಅನುದಾನ ರೂ.3 ಕೋಟಿ ಖರ್ಚಾಗದೆ ಸರ್ಕಾರಕ್ಕೆ ವಾಪಾಸ್ಸಾಗಿದೆ. ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸೋಣವೆಂದು ಕರೆ ನೀಡಿದ ಕ್ಷೇತ್ರದ ಶಾಸಕರ ಸಹಕಾರವನ್ನು ಕೂಡ ಅಧ್ಯಕ್ಷರು ಪಡೆಯುತ್ತಿಲ್ಲವೆಂದು ಟೀಕಿಸಿದರು.
ಸಿಬ್ಬಂದಿಗಳ ಕೊರತೆ ನಗರಸಭೆಯನ್ನು ಅತಿಯಾಗಿ ಕಾಡುತ್ತಿದೆ, ಕಳೆದ ಒಂದು ವರ್ಷದಿಂದ ಸರ್ವರ್ ಸಮಸ್ಯೆ ಮಿತಿ ಮೀರಿದ್ದು, ಸಾರ್ವಜನಿಕರ ಅರ್ಜಿಗಳು ವಿಲೇವಾರಿಯಾಗದ ಪರಿಸ್ಥಿತಿ ಎದುರಾಗಿದೆ. ಐಟಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಕಾರ್ಯಕ್ಕೂ ನಗರಸಭೆ ಆಡಳಿತ ಮಂಡಳಿ ಮುಂದಾಗಿಲ್ಲ. ವಿನಾಕಾರಣ ಇರುವ ಸಿಬ್ಬಂದಿಗಳಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದ್ದು, ಇದೇ ಕಾರಣಕ್ಕೆ ಕೆಲವು ಅಧಿಕಾರಿಗಳು ವರ್ಗಾವಣೆ ಪಡೆದು ತೆರಳಿದ್ದಾರೆ. ಅಧ್ಯಕ್ಷರ ಅಸಹಾಯಕ ಮನೋಭಾವ ಜನಸಾಮಾನ್ಯರ ಮೇಲೆ ಪರಿಣಾಮ ಬೀರುತ್ತಿದೆ. ಇವರ ನಿಷ್ಕಿçಯತೆಯ ಲಾಭ ಪಡೆದುಕೊಳ್ಳುತ್ತಿರುವ ಸ್ಥಾಯಿ ಸಮಿತಿ ಅಧ್ಯಕ್ಷರು ನಿಯಮ ಮೀರಿ ವರ್ತಿಸುತ್ತಿದ್ದಾರೆ ಎಂದು ಅಮೀನ್ ಮೊಹಿಸಿನ್ ಆರೋಪಿಸಿದರು.
ಹೆದ್ದಾರಿ ಬದಿಯಲ್ಲಿ ಶೆಡ್ ಗಳ ನಿರ್ಮಾಣಕ್ಕೆ ಕಾನೂನಿನಡಿ ಅವಕಾಶವಿಲ್ಲದಿದ್ದರೂ ಅಕ್ರಮ ಶೆಡ್ ಗಳು ತಲೆ ಎತ್ತುತ್ತಿವೆ. ಇವುಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ನಗರಸಭೆ ಆಡಳಿತ ಮಂಡಳಿ ಬೀದಿ ಬದಿ ವ್ಯಾಪಾರಿಗಳಿಗೆ ಮಾನಸಿಕ ಕಿರುಕುಳ ನೀಡುವುದರಲ್ಲಿ ಮಗ್ನವಾಗಿದೆ ಎಂದು ಟೀಕಿಸಿದರು.
::: ಕಾನೂನು ಹೋರಾಟ :::
ನಗರಸಭೆಯ ನಿಯಮಕ್ಕೆ ವಿರುದ್ಧವಾಗಿ ಆಡಳಿತ ಪಕ್ಷದ ಸದಸ್ಯರೊಬ್ಬರು ಹಣವನ್ನು ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದು, ನಿಯಮ ಉಲ್ಲಂಘಿಸಿದ ಸದಸ್ಯನ ಸದಸ್ಯತ್ವ ರದ್ದು ಆಗುವವರೆಗೆ ಹೋರಾಟ ಮುಂದುವರೆಯಲಿದೆ ಎಂದರು.
::: ಸೂಪರ್ ಸೀಡ್ ಮಾಡಿ :::
ಮತ್ತೊಬ್ಬ ಸದಸ್ಯ ಎಂ.ಕೆ.ಮನ್ಸೂರ್ ಮಾತನಾಡಿ ನಗರದ ಜನರಿಗೆ ಯಾವುದೇ ಲಾಭ ಇಲ್ಲದೆ ಇರುವುದರಿಂದ ಮತ್ತು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವುದರಿಂದ ನಗರಸಭೆಯನ್ನು ಸೂಪರ್ ಸೀಡ್ ಮಾಡಬೇಕೆಂದು ಒತ್ತಾಯಿಸಿದರು.
ಇತ್ತೀಚೆಗೆ ಡಾಟ ಆಪರೇಟರ್ ವೊಬ್ಬರ ಮೇಲೆ ಆಡಳಿತ ಪಕ್ಷದ ಸದಸ್ಯರು ದಬ್ಬಾಳಿಕೆ ನಡೆಸಿದ್ದು, ಇದು ಖಂಡನೀಯ. ಅಧಿಕಾರಿಗಳು ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಕೆಲವು ಸಿಬ್ಬಂದಿಗಳು ಒತ್ತಡದಿಂದಾಗಿ ಅನಾರೋಗ್ಯ ಪೀಡಿತರಾಗಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯರುಗಳಾದ ನೀಮಾಅಶ್ರದ್, ಬಶೀರ್, ಮೇರಿ ವೇಗಸ್ ಹಾಗೂ ಎಸ್‌ಡಿಪಿಐ ನಗರಾಧ್ಯಕ್ಷ ರಫೀಕ್ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*