ವಿರಾಜಪೇಟೆ ನ.18 : ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಭವಿಷ್ಯದ ಭಾರತ ಪ್ರಗತಿಯತ್ತ ಸಾಗಲು ಸಹಕಾರಿಯಾಗಲಿದೆ ಎಂದು ವಿರಾಜಪೇಟೆ ಜಾನಪದ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಸಾಹಿತಿ ರಂಜಿತ ಕಾರ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ.
ವಿರಾಜಪೇಟೆಯ ಮೌಂಟೇನ್ ವ್ಯೂ ಶಾಲೆಯಲ್ಲಿ ನಡೆದ ಸಂಭ್ರಮದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸ್ವಾತಂತ್ರ್ಯ ಭಾರತ ಅಭಿವೃದ್ಧಿಯತ್ತ ಸಾಗಬೇಕಾದರೆ ಇಂದಿನ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಉತ್ತಮ ಆರೋಗ್ಯ, ಮಕ್ಕಳ ಹಕ್ಕು ರಕ್ಷಣೆ, ಶಿಕ್ಷೆ ರಹಿತ ಶಿಕ್ಷಣ, ಪರಿಶುದ್ಧ ಪ್ರೇಮ ಕಲಿಕೆ, ಬದುಕುವ, ವಿಕಸಿಸುವ, ಭಾಗವಹಿಸುವ ಹಕ್ಕುಗಳ ಅನುಪಾಲನೆಯಾಗಬೇಕು ಎಂದರು.
ಮಕ್ಕಳಲ್ಲಿ ಯಾವ ರೀತಿಯ ಅಭಿರುಚಿಯಿದೆ ಎಂಬುವುದನ್ನು ಪೋಷಕರು ಮೊದಲು ಅರಿತುಕೊಂಡು ಉತ್ತಮ ಗುರಿಯೆಡೆಗೆ ತಲುಪಿಸಲು ಪ್ರಯತ್ನಿಸಬೇಕು. ಸೋಲು ಗೆಲುವು ಎಂದಿಗೂ ಇದ್ದಿದ್ದೇ, ಆದರೆ ಪ್ರಯತ್ನ ನಮ್ಮದಾಗಿರಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿ ಹಾಗೂ ವಿವಿಧ ಸ್ಪರ್ಧೆಯ ತೀರ್ಪುಗಾರರಾಗಿ ಪಾಲ್ಗೊಂಡಿದ್ದ ವಿರಾಜಪೇಟೆಯ ವಕೀಲರಾದ ಅನುಪಮ ಕಿಶೋರ್ ಮಾತನಾಡಿ ನಮ್ಮ ದೇಶದಲ್ಲಿ ವಿಭಿನ್ನ ಸಂಸ್ಕೃತಿ, ಆಚಾರ ವಿಚಾರ ಅಡಗಿದೆ. ದೇಶದ ಭವಿಷ್ಯದಲ್ಲಿ ಮಕ್ಕಳ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಮತ್ತೋರ್ವ ಮುಖ್ಯ ಅತಿಥಿ ಮಡಿಕೇರಿಯ ರಾಜೇಶ್ವರಿ ಶಾಲೆಯ ಮುಖ್ಯೋಪದ್ಯಾಯರಾದ ದಿವ್ಯ ಅರೋರಾ ಮಾತನಾಡಿ ಕೊಡಗು ಸಂಸ್ಕೃತಿಯ ತವರೂರು. ಇಲ್ಲಿನ ಉಡುಗೆ ತೊಡುಗೆ ಸಂಸ್ಕಾರ ಎಲ್ಲವೂ ವಿಭಿನ್ನ ವಿಶಿಷ್ಠ. ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ದೆಗಳನ್ನು ಹಮ್ಮಿಕೊಂಡಿರುವುದು ಮಕ್ಕಳಲ್ಲಿ ಸ್ಪರ್ಧಾ ಮನೊಭಾವ ಬೆಳೆಯಲು ಸಹಕಾರಿಯಾಗುತ್ತದೆ. ಇಲ್ಲಿ ವಿವಿಧ ರಾಜ್ಯಗಳ ಸಂಸ್ಕೃತಿ ಅನಾವರಣಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರು ಹಾಗೂ ಸಂಸ್ಥೆಯ ಕಾರ್ಯದರ್ಶಿಗಳು ಆದ ಸಯ್ಯದ್ ನೆಖಾತ್ ನಜೀರ್ ಅವರು, ಆಧುನಿಕ ಭಾರತದ ಶಿಲ್ಪಿಯಾಗಿದ್ದ, ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಮಕ್ಕಳ ಬಗ್ಗೆ ಅಪಾರ ಪ್ರೀತಿ ಇದ್ದುದರಿಂದ ಮಕ್ಕಳ ಪಾಲಿಗೆ ಅವರು ಚಾಚಾ ನೆಹರೂ ಆಗಿದ್ದರು. ಆದ್ದರಿಂದಲೇ ಅವರು ತಮ್ಮ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಬೇಕೆಂದು ನಿರ್ಧರಿಸಿದ್ದರು. ರಾಷ್ಟçದ ಅಭಿವೃದ್ಧಿಯಲ್ಲಿ ನೆಹರು ಅವರ ಕೊಡುಗೆ ಅಪಾರವಾಗಿದೆ ಎಂದರು.
ವಿವಿಧ ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿಗಳು ನೆರೆದಿದ್ದವರ ಗಮನ ಸೆಳೆದರು. ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು ರಾಜ್ಯಗಳ ಸಂಸ್ಕೃತಿ, ಆಚಾರ-ವಿಚಾರ, ಭಾಷೆ ಉಡುಗೆ ತೊಡುಗೆಗಳನ್ನು ಬಿಂಬಿಸುವ ಸ್ಪರ್ಧೆಗಳು ನಡೆದವು. ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.
ಚಿತ್ರಕಲೆ, ಹಾಡು, ಅಭಿನಯಗೀತೆ, ಕಥೆ ಹೇಳುವುದು ಬಣ್ಣ ಬಣ್ಣದ ಬಲೂನು ಶೃಂಗಾರ ಮತ್ತಿತರ ಕಾರ್ಯಕ್ರಮಗಳಲ್ಲಿ ಪುಟಾಣಿಗಳು ಮಿಂಚಿದರು.
ಸಂಸ್ಥೆಯ ಅಧ್ಯಕ್ಷ ಸಯ್ಯದ್ ಕಶ್ಮೀರ ನಜೀರ್, ಉಪಾಧ್ಯಕ್ಷ ಸಯ್ಯದ್ ಕರೀನ ನಜೀರ್, ವಿದ್ಯಾರ್ಥಿಗಳು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.
Breaking News
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*