ಮಡಿಕೇರಿ ನ.18 : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024ರ ಸಂಬಂಧ ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು, ತಿದ್ದುಪಡಿ ಇತ್ಯಾದಿ ಸಂಬಂಧ ಕೊಡಗಿನ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ. ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಯವರು, ಮತದಾರರ ನೋಂದಣಾಧಿಕಾರಿ ಹಾಗೂ ಹಿರಿಯ ಉಪವಿಭಾಗಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು.










