ಮಡಿಕೇರಿ ನ.18 : ಮಡಿಕೇರಿ ಯೂತ್ ಕ್ರಿಕೆಟ್ ಕ್ಲಬ್(ಎಂವೈಸಿಸಿ) ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.18 ರಿಂದ 24 ರವರೆಗೆ ಜಿಲ್ಲಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ ನ ಉಪಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಪ್ಪ ಅವರ ಪರಿಶ್ರಮದಿಂದ 39 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಎಂವೈಸಿಸಿ, ಕ್ರಿಕೆಟ್ ಆಟಕ್ಕೆ ಉತ್ತೇಜನ ನೀಡುತ್ತಾ, ಪಂದ್ಯಾವಳಿಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ನೋಂದಾಯಿತ ಜಿಲ್ಲೆಯ ಎರಡು ಕ್ಲಬ್‌ಗಳಲ್ಲಿ ಎಂವೈಸಿಸಿ ಕೂಡ ಒಂದಾಗಿದೆ. ಕ್ಲಬ್‌ನಿಂದ ನಿರಂತರವಾಗಿ ಪಂದ್ಯಾವಳಿಗಳನ್ನು ನಡೆಸಲು ಸಾಧ್ಯವಾಗದಿದ್ದರು, ಕಳೆದ ಏಳೆಂಟು ವರ್ಷಗಳಿಂದ ತಪ್ಪದೆ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿಕೊಂಡು ಬರುತ್ತಿರುವುದಾಗಿ ಹೇಳಿದರು.
ಈ ಬಾರಿಯ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾ ವ್ಯಾಪ್ತಿಯ 18 ರಿಂದ 20 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಆಟಗಾರರು ಕೊಡಗಿನ ಮೂಲದವರೇ ಆಗಿರಬೇಕೆಂದು ಸ್ಪಷ್ಟ ಪಡಿಸಿದ ಅವರು, 20 ಓವರ್‌ಗಳ ಈ ಪಂದ್ಯಾವಳಿಯಲ್ಲಿ ವಿಜೇತವಾಗುವ ತಂಡಕ್ಕೆ 30 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 20 ಸಾವಿರ ರೂ. ನಗದು ಮತ್ತು ಟ್ರೋಫಿ ಹಾಗೂ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತದೆ ಎಂದರು.
ಆಸಕ್ತ ತಂಡಗಳು ಡಿ.10 ರ ಒಳಗಾಗಿ ತಮ್ಮ ಹೆಸರನ್ನು ಮೈದಾನ ಶುಲ್ಕ 5 ಸಾವಿರ ರೂ.ಗಳೊಂದಿಗೆ ನೋಂದಾಯಿಸಿಕೊಳ್ಳಬೇಕು. ಈ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ಕ್ಲಬ್‌ನ ಟಿ.ಆರ್.ಧ್ರುವ ಮೊ.8310128790, ಎಂ.ಎ.ಪ್ರಿನ್ಸ್ ಕುಶಾಲಪ್ಪ ಮೊ.8660723170ವನ್ನು ಸಂಪರ್ಕಿಸಬಹುದು ಎಂದರು.
::: ಹದಗೆಟ್ಟ ಮೈದಾನ :::
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪೊನ್ನಚ್ಚನ ಮಧು, ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಂದರ್ಭ ವಾಹನ ನಿಲುಗಡೆಗೆ ಅವಕಾಶ ನೀಡುತ್ತಿರುವುದರಿಂದ ಮೈದಾನ ಸಂಪೂರ್ಣ ಹದಗೆಟ್ಟಿದೆ. ಸಮರ್ಪಕ ನಿರ್ವಹಣೆ ಇಲ್ಲದೆ ಪಂದ್ಯಾವಳಿಗಳನ್ನು ನಡೆಸುವುದೇ ದುಸ್ತರವಾಗಿದೆ. ಕ್ಲಬ್ ವತಿಯಿಂದ ಮೈದಾನದ ನಿರ್ವಹಣೆಗೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಂವೈಸಿಸಿ ವ್ಯವಸ್ಥಾಪಕ ಎ.ಎಂ.ಅಜಯ್, ಸದಸ್ಯರುಗಳಾದ ಟಿ.ಆರ್.ಧ್ರುವ, ಎಂ.ಎ.ಪ್ರಿನ್ಸ್ ಕುಶಾಲಪ್ಪ ಹಾಗೂ ಡಿ.ಟಿ.ನಿತಿನ್ ಕುಮಾರ್ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*