ಮಡಿಕೇರಿ ನ.18 : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024 ರ ಸಂಬಂಧ ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು, ತಿದ್ದುಪಡಿ ಇತ್ಯಾದಿ ಸಂಬಂಧ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ತಹಶೀಲ್ದಾರರು ಇತರರು ಇದ್ದರು.










