ಮಡಿಕೇರಿ ನ.19 : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಒಂದು ಮಿಶ್ರ ತಳಿ ಹಸು ಘಟಕ ಅನುಷ್ಠಾನಕ್ಕೆ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಗೆ ವಿಶೇಷ ಘಟಕ ಯೋಜನೆಯಡಿ 7 ಮತ್ತು ಗಿರಿಜನ ಉಪಯೋಜನೆಯಡಿ 14 ಗುರಿ ನಿಗದಿಪಡಿಸಲಾಗಿದ್ದು ಘಟಕದ ವೆಚ್ಚ ರೂ.65 ಸಾವಿರ ಸಹಾಯಧನ ರೂ:5,8500 ಶೇ.90), ಫಲಾನುಭವಿಗಳ ವಂತಿಗೆ/ ಬ್ಯಾಂಕ್ ಸಾಲ ರೂ. 6,500 (ಶೇ.10) ರಂತೆ ಘಟಕ ಅನುಷ್ಠಾನಗೋಳಿಸಲಾಗುತ್ತದೆ.
ಪ.ಜಾತಿ/ ಪ.ಪಂಗಡ ಮಹಿಳೆಯರಿಗೆ ಶೇ.33.3 ಮತ್ತು ಅಂಗವಿಕಲಕರಿಗೆ ಶೇ.3 ರಷ್ಟು ಅದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಫಲಾನುಭವಿಗಳ ಆರ್.ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪಶುವೈದ್ಯ ಆಸ್ಪತ್ರೆ, ಸೋಮವಾರಪೇಟೆ ಮೊ. 9448655660, ಸಹಾಯಕ ನಿರ್ದೇಶಕರು ಪಶುವೈದ್ಯ ಆಸ್ಪತ್ರೆ ಕುಶಾಲನಗರ ಮೊ. 8951405025, ಸಹಾಯಕ ನಿರ್ದೇಶಕರು ಪಶುವೈದ್ಯ ಆಸ್ಪತ್ರೆ ಮಡಿಕೇರಿ ಮೊ: 9448647276, ಪಶುವೈದ್ಯ ಆಸ್ಪತ್ರೆ ವಿರಾಜಪೇಟೆ ಮೊ. 9141093996, ಪಶುವೈದ್ಯ ಆಸ್ಪತ್ರೆ ಪೊನ್ನಂಪೇಟೆ ಮೊ. 9449081343 ನ್ನು ಸಂಪರ್ಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಲಿಂಗರಾಜ ದೊಡ್ಡಮನಿ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*