ಮಡಿಕೇರಿ ನ.19 : ಕೊಡಗು ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಮಕ್ಕಳ ದಿನಾಚರಣೆ ಪ್ರಯುಕ್ತ ಸ್ಪರ್ಧಾ” ಕಾರ್ಯಕ್ರಮವು ನವೆಂಬರ್, 20 ರಂದು ಬೆಳಗ್ಗೆ 11 ಗಂಟೆಗೆ “ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ” ಯಲ್ಲಿ ಸ್ಪರ್ಧೆ ನಡೆಯಲಿದೆ.
ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ 2 ವಿಭಾಗಗಳಾಗಿ ವಿಂಗಡಿಸಿ ಯಾವುದಾದರು ಒಂದು ಚಟುವಟಿಕೆಯಲ್ಲಿ ಭಾಗವಹಿಸುವುದು.
9-12, 13-16 ವರ್ಷದ ಮಕ್ಕಳಿಗೆ ಶಾಸ್ತ್ರೀಯ ನೃತ್ಯ/ ಜಾನಪದ ನೃತ್ಯ/ ಕರ್ನಾಟಕ ಶಾಸ್ತ್ರೀಯ ಸಂಗೀತ/ಹಿಂದೂಸ್ತಾನಿ ಸಂಗೀತ/ ಸುಗಮ ಸಂಗೀತ, ವಾದ್ಯ ಸಂಗೀತ/ತಬಲ/ಮೃದಂಗ/ ಕೀಬೋರ್ಡ್ /ಕೊಳಲು/ಡೊಳ್ಳು ಮತ್ತು ನಗಾರಿ, ವಿಜ್ಞಾನ ಸೃಜನಾತ್ಮಕ ಆವಿಷ್ಕಾರ ಹಾಗೂ ಚಿತ್ರ ಕಲೆ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಿಜೇತ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಹಾಗೆಯೇ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳನ್ನು ನವೆಂಬರ್, 21 ರಂದು ರಾಜ್ಯ ಮಟ್ಟದಲ್ಲಿ ನಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆದ್ದರಿಂದ ಈ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ನವೆಂಬರ್, 19 ರೊಳಗೆ ದೂರವಾಣಿ ಸಂಖ್ಯೆ 8618861505, 6363285685 ಸಮಯ 10.30 ರಿಂದ 5.00 ರವರೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ಕಛೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*