ಮಡಿಕೇರಿ ನ.19 : ಯಾವುದೇ ವ್ಯಕ್ತಿ ಪೋಷಕರನ್ನು ಕಳೆದುಕೊಂಡ, ತಿರಸ್ಕರಿಸಲ್ಪಟ್ಟ, ತ್ಯಜಿಸಲ್ಪಟ್ಟ ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು ಅಥವಾ ದತ್ತು ಪಡೆಯುವುದು ಮಾಡಿದಲ್ಲಿ ಅಂತಹ ವ್ಯಕ್ತಿಗೆ ಐದು ವರ್ಷಗಳ ಅವಧಿಯವರೆಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದು.
ಒಂದು ವೇಳೆ ಇಂತಹ ಅಪರಾಧಗಳಲ್ಲಿ ಯಾವುದೇ ಆಸ್ಪತ್ರೆ, ನರ್ಸಿಂಗ್ ಹೋಮಿನ ಅಥವಾ ಹೆರಿಗೆ ಕೇಂದ್ರದ ಸಿಬ್ಬಂದಿಗಳು ಶಾಮೀಲಾಗಿದ್ದರೆ ಶಿಕ್ಷೆಯ ಅವಧಿ ಮೂರು ವರ್ಷಗಳಿಗೆ ಕಡಿಮೆ ಇಲ್ಲದಂತೆ ಏಳು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾಗಿದೆ. ಅನಾಥ, ಪರಿತ್ಯಕ್ತ ಮಕ್ಕಳು ಕಂಡು ಬಂದಲ್ಲಿ ಹಾಗೂ ಮಗುವನ್ನು ದತ್ತು ಪಡೆಯಲು ಇಚ್ಚಿಸುವ ಪೋಷಕರು ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ ಹಾಗೂ ದತ್ತು ಮಾರ್ಗದರ್ಶನ ಕೇಂದ್ರ, ಸರ್ಕಾರಿ ಬಾಲಕಿಯರ ಬಾಲಮಂದಿರದ ಆವರಣ, ಮುಳಿಯ ಲೇಔಟ್, ಎಫ್‍ಎಂಕೆಎಂಸಿ. ಕಾಲೇಜು ಹತ್ತಿರ, ಮಡಿಕೇರಿ ದೂ.ಸಂ.08272-200450 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*