ಕುಶಾಲನಗರ ನ.19 : ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಕೂಡುಮಂಗಳೂರು ಗ್ರಾಮ ಪಂಚಾಯತಿ ವತಿಯಿಂದ
ಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಆಶ್ರಯದಲ್ಲಿ ಸ್ವಚ್ಛ ಭಾರತ್ ಅಭಿಯಾನ ಹಾಗೂ ಗ್ರೋ ಗ್ರೀನ್ ಅಭಿಯಾನದಡಿ ಪ್ರತಿ ವರ್ಷ ನವೆಂಬರ್ 19 ರಂದು ಆಚರಿಸುವ ವಿಶ್ವ ಶೌಚಾಲಯ ದಿನ: 2023 ರ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಚತಾ ಜನಜಾಗೃತಿ ಆಂದೋಲನಕ್ಕೂ ಮುನ್ನ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು ಸ್ವತಃ ಶಾಲಾ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಮಕ್ಕಳಿಗೆ ಶೌಚಾಲಯವನ್ನು ಸ್ವಚ್ಚಗೊಳಿಸುವ ಕುರಿತು ಅರಿವು ಮೂಡಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಟಿ.ಜಿ.ಪ್ರೇಮಕುಮಾರ್ ಅವರು ಶಾಲಾ ಶೌಚಾಲಯ ಸ್ವಚ್ಚಗೊಳಿಸಿದ ಕುರಿತು ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಡಿ. ಭಾಸ್ಕರ್ ನಾಯಕ್ ಶ್ಲಾಘಿಸಿದರು.
ಇದೊಂದು ಶಾಲಾ ಮುಖ್ಯಸ್ಥರು ಸ್ವತಃ ಶೌಚಾಲಯ ತೊಳೆಯುವ ಮೂಲಕ ಮಕ್ಕಳಿಗೆ ಹಾಗೂ ಸಮುದಾಯಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರಶಂಸಿದರು.
ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು ಶಾಲಾ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಕುರಿತು ಕಳೆದ ಎರಡೂವರೆ ದಶಕಗಳಿಂದ ಜನಜಾಗೃತಿ ಮೂಡಿಸುತ್ತಿದ್ದಾರೆ.