ಬೆಂಗಳೂರು ನ.19 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ತಾಯಿ ಹಾಗೂ 9 ತಿಂಗಳ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಮಹದೇವಪುರದ ಕಾಡುಗುಡಿ ಠಾಣೆ ವ್ಯಾಪ್ತಿಯ ವೈಟ್ ಫೀಲ್ಡ್ ನ ಹೋಪ್ ಫಾರಂ ಸಿಗ್ನಲ್ ಬಳಿ ನಡೆದಿದೆ.
ಭಾನುವಾರ ಮುಂಜಾನೆ 6 ಗಂಟೆ ಸುಮಾರಿಗೆ ಪಾದಾಚಾರಿ ಮಾರ್ಗದಲ್ಲಿ ಮನೆಗೆ ತೆರಳುತ್ತಿದ್ದ ಸೌಂದರ್ಯ ಹಾಗೂ ಮಗಳು ಸುವಿಶಾಲಯ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ಸಾವನ್ನಪ್ಪಿದ್ದಾರೆ. ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಎಇ, ಎಇಇಯನ್ನು ಅಮಾನತುಗೊಳಿಸಿದ್ದೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಕೆ.ಜೆ.ಜಾರ್ಜ್ ಅವರು, ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಹೇಳಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*