ಮಡಿಕೇರಿ ನ.20 : ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ, ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿದೆ. ಈ ನ್ಯೂನತೆಗಳನ್ನು ಕೇಳುವವರೇ ಇಲ್ಲದಾಗಿದೆ. ನಗರಸಭೆ, ತಾಲ್ಲೂಕು ಕಚೇರಿ, ಪಂಚಾಯಿತಿಗಳಲ್ಲಿ ಅರ್ಜಿಗಳು ವಿಲೇವಾರಿಯಾಗದೆ ಸಾರ್ವಜನಿಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹ್ಯೂಮನ್ ರೈಟ್ಸ್ ಇಂಟರ್‌ನ್ಯಾಷನಲ್ ಫೆಡರೇಷನ್ ಸಂಸ್ಥೆಯ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹ್ಯೂಮನ್ ರೈಟ್ಸ್ ಇಂಟರ್‌ನ್ಯಾಷನಲ್ ಫೆಡರೇಷನ್ ದೇಶದೆಲ್ಲೆಡೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದ್ದು, ಕರ್ನಾಟಕದಲ್ಲೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಸಂಸ್ಥೆ ವತಿಯಿಂದ ಮಾನವ ಹಕ್ಕು ಅರಿವು ಕಾರ್ಯಕ್ರಮ ಡಿಸೆಂಬರ್ ತಿಂಗಳಿನಿಂದ ಜಿಲ್ಲೆಯಾದ್ಯಂತ ಆರಂಭಗೊಳ್ಳಲಿದೆ. ವಿವಿಧ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅಧಿಕಾರಿಗಳನ್ನು ಒಳಗೊಂಡಂತೆ ಹಿರಿಯರು ಮಾನವ ಹಕ್ಕಿನ ಕುರಿತು ವಿವರಿಸಲಿದ್ದಾರೆ ಎಂದು ತಿಳಿಸಿದರು.
ಇಂದು ಸರ್ಕಾರಿ ಕಚೇರಿಗಳಲ್ಲಿ ಮಾನವ ಹಕ್ಕಿನ ಉಲ್ಲಂಘನೆಯಾಗುತ್ತಿದೆ. ಫಾರಂ ನಂಬರ್ 3, ಆರ್‍ಟಿಸಿ ಸೇರಿದಂತೆ ಹಲವು ಕಡತಗಳು ಸುಲಭವಾಗಿ ಅರ್ಜಿದಾರರ ಕೈಸೇರುತ್ತಿಲ್ಲ. ಕಡತ ವಿಲೇವಾರಿಗೆ ದಿನ ನಿಗದಿಯಾಗಿದ್ದರೂ ಆ ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಮಾಡಿ ಕೊಡಲು ಕಚೇರಿ ಸಿಬ್ಬಂದಿಗಳು ಹಿಂದೇಟು ಹಾಕುತ್ತಿದ್ದಾರೆ. ಯಾವುದೇ ಸಂದರ್ಭದಲ್ಲೂ ಕಚೇರಿಗಳಿಗೆ ಭೇಟಿ ನೀಡಿದಾಗ ಸಿಬ್ಬಂದಿಗಳು ಇರುವುದಿಲ್ಲ. ಅಲ್ಲದೆ ಇತರೆ ಸಿಬ್ಬಂದಿಗಳಿಂದ ಹಾರಿಕೆಯ ಉತ್ತರಗಳು ಕೇಳಿ ಬರುತ್ತಿದೆ. ಭ್ರಷ್ಟಾಚಾರ ಮತ್ತು ಕರ್ತವ್ಯಲೋಪ ಮಿತಿ ಮೀರುತ್ತಿದೆ. ಮಾಹಿತಿ ಹಕ್ಕು ಕಾಯಿದೆಯಡಿ ಕಡತದ ಬಗ್ಗೆ ಮಾಹಿತಿ ಕೇಳಿದರೂ ಸೂಕ್ತ ಸ್ಪಂದನೆ ನೀಡದೆ ಅಧಿಕಾರಿಗಳು ಅಸಡ್ಡೆ ಮನೋಭಾವನೆಯನ್ನು ತೋರುತ್ತಿದ್ದಾರೆ. ಜಿಲ್ಲೆಯ ಹಲವು ಕಡೆ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿದರು.
ವಿವಿಧ ಯೋಜನೆಯಡಿ ಕಾಮಗಾರಿ ಮುಗಿದರೂ ಗುತ್ತಿಗೆದಾರರಿಗೆ ನೀಡಬೇಕಾದ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಗುತ್ತಿಗೆದಾರರು ತೊಂದರೆ ಅನುಭವಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೊಡಗು ಪ್ರವಾಸೋದ್ಯಮ ತಾಣವಾಗಿದ್ದರೂ, ಪ್ರಕೃತಿ ಸೌಂದರ್ಯದ ಮಡಿಕೇರಿ ನಗರದ ಹೃದಯ ಭಾಗ ಸ್ಟೋನ್‍ಹಿಲ್ ಸಮೀಪ ತ್ಯಾಜ್ಯ ಸುರಿಯುತ್ತಿರುವುದು ವಿಪರ್ಯಾಸ. ಮಳೆಗಾಲದಲ್ಲಿ ತ್ಯಾಜ್ಯದ ನೀರು ಹರಿದು ನಗರಕ್ಕೆ ಸೇರಿ ರೋಗಗಳು ಹರಡುವ ಭೀತಿ ಇದ್ದರೂ ನಗರಸಭೆ ನಿರ್ಲಕ್ಷ್ಯ ವಹಿಸಿದೆ. ಜಿಲ್ಲಾಧಿಕಾರಿಗಳು ತಮ್ಮ ಅಧಿಕಾರವನ್ನು ಬಳಸಿ ಕಸ ವಿಲೇವರಿಗೆ ಸೂಕ್ತ ಜಾಗವನ್ನು ಕಲ್ಪಿಸಕೊಡಬೇಕು ಎಂದು ಹರೀಶ್ ಜಿ.ಆಚಾರ್ಯ ಒತ್ತಾಯಿಸಿದರು.
ನಗರದ ಮಹದೇವಪೇಟೆಯ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆಯಾದಾಗ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಆದರೆ ಆ ಸಂದರ್ಭದಲ್ಲಿ ಮಾಹಿತಿ ಹಕ್ಕು ಪ್ರಕಾರ ನಗರಸಭೆಯಿಂದ ತಪ್ಪು ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣ ನಡೆದರೆ ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದರು.
ನಾಗರೀಕರಲ್ಲಿ ಮಾನವ ಹಕ್ಕಿನ ಅರಿವು ಇಲ್ಲದಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಮುಖ್ಯ ಕಾರಣವಾಗಿದೆ. ಆದ್ದರಿಂದ ನಮ್ಮ ಹಕ್ಕುಗಳನ್ನು ಕೇಳುವುದಕ್ಕಾಗಿ ಜನಜಾಗೃತಿ ಮೂಡಿಸಲು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಮಾನವ ಹಕ್ಕು ಅರಿವು ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಿದೆ ಎಂದರು.
ಸರ್ಕಾರಿ ಕಚೇರಿಗಳಲ್ಲಿ ಸಕಾಲದಲ್ಲಿ ಅರ್ಜಿಗಳು ವಿಲೇವಾರಿಯಾಗದಿದ್ದಲ್ಲಿ, ಫಾರಂ ನಂ.3 ಮತ್ತು ಆರ್‍ಟಿಸಿ ಸಿಗಲು ವಿಳಂಬವಾದಲ್ಲಿ ಸಾರ್ವಜನಿಕರು ಹ್ಯೂಮನ್ ರೈಟ್ಸ್ ಸಂಸ್ಥೆಯನ್ನು ಸಂಪರ್ಕಿಸಿದಲ್ಲಿ ಸೂಕ್ತ ಸ್ಪಂದನೆ ನೀಡಲಾಗುವುದು ಎಂದು ತಿಳಿಸಿದರು.
ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದ್ದು, ನಿವೃತ್ತ ಅಧಿಕಾರಿಗಳು ಹಾಗೂ ಆಸಕ್ತರನ್ನು ಸೇರಿಸಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ 91648 57163, 96326 11469, 94485 88037 ಸಂಪರ್ಕಿಸಬಹುದಾಗಿದೆ ಎಂದು ಹರೀಶ್ ಜಿ.ಆಚಾರ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹ್ಯೂಮನ್ ರೈಟ್ಸ್ ಇಂಟರ್‌ನ್ಯಾಷನಲ್ ಫೆಡರೇಷನ್ ಜಿಲ್ಲಾಧ್ಯಕ್ಷ ಕೆ.ಕೆ.ದಾಮೋದರ್, ಕಾರ್ಯದರ್ಶಿ ಸೋಮನಾಥ್, ಮಡಿಕೇರಿ ತಾಲ್ಲೂಕು ಸಲಹೆಗಾರ ಚೌರೀರ ರಮೇಶ್ ಹಾಗೂ ಮೂರ್ನಾಡು ಅಧ್ಯಕ್ಷ ಕೋರನ ರಾಘವೇಂದ್ರ ಉಪಸ್ಥಿತರಿದ್ದರು.
Breaking News
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*