ಮಡಿಕೇರಿ ನ.20 : ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ಕಾನೂರು ರಸ್ತೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಾಲ ಎಂದು ಗುರುತಿಸಲಾಗಿದೆ, ಆದರೆ ಇವರ ವಾರಸುದಾರರು ಯಾರೆಂದು ತಿಳಿಯದೇ ಇರುವುದರಿಂದ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ನ.19 ರಂದು ಬೆಳಗ್ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಅವರು ಮೃತಪಟ್ಟಿದ್ದಾರೆ. ಬಾಲ ಅವರ ಸಂಬಂಧಿಕರು ಯಾರು ಹಾಗೂ ಊರು ಯಾವುದೆಂದು ತಿಳಿಯದ ಹಿನ್ನೆಲೆ ವಾರಸುದಾರರು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊನ್ನಂಪೇಟೆ ಪೊಲೀಸರು ಮನವಿ ಮಾಡಿದ್ದಾರೆ.
ಬೈಕ್ ಸವಾರ ಪರಾರಿಯಾಗಿದ್ದು, ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್‌ಕುಮಾರ್, ಗೋಣಿಕೊಪ್ಪ ವೃತ್ತದ ಸಿಪಿಐ ಗೋವಿಂದರಾಜು, ಪೊನ್ನಂಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ನವೀನ್.ಜಿ ಹಾಗೂ ಸಿಬ್ಬಂದಿಗಳು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.








