ಮಡಿಕೇರಿ ನ.21 : ಮಡಿಕೇರಿಯ ಡಿಪಿ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಜಿಲ್ಲಾ ಮಟ್ಟದ ನಾಕೌಟ್ ಮಾದರಿಯ ಕಬಡ್ಡಿ ಚಾಂಪಿಯನ್ ಶಿಪ್ “ಮಿಸ್ಟಿ ಕಪ್-2023” ಪಂದ್ಯಾವಳಿ ಡಿ.3 ರಂದು ನಡೆಯಲಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆ ಮಾಡಿ ಮಾಹಿತಿ ನೀಡಿದ ಕ್ಲಬ್ ನ ಸದಸ್ಯ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕೊಡಗಿನ ಕಬಡ್ಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ, ಬೆಳೆಸುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಿರುವುದಾಗಿ ತಿಳಿಸಿದರು.
ಹರಿಯಾಣದಲ್ಲಿ ನಡೆದ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್‍ನಲ್ಲಿ ಆಡಿರುವ ಕಬಡ್ಡಿ ಕ್ರೀಡಾಪಟು ಹೊಟ್ಟೆಯಂಡ ಸಚಿನ್ ಪೂವಯ್ಯ ನೇತೃತ್ವದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಒಂದು ದಿನದ ರೋಚಕ ಪಂದ್ಯಾವಳಿ ನಡೆಯಲಿದೆ. ರಾಷ್ಟ್ರೀಯ ತರಬೇತುದಾರ ಮಂಜುನಾಥ್ ಹಾಗೂ ರಾಷ್ಟ್ರೀಯ ಕಬಡ್ಡಿ ಆಟಗಾರ ಶಶಿಧರ್ ಅವರುಗಳು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ.
ಡಿಪಿ ಸ್ಪೋಟ್ರ್ಸ್ ಕ್ಲಬ್‍ನ ಕಾರ್ಯದರ್ಶಿ ಅಜ್ಜಮಕ್ಕಡ ವಿನು ಕುಶಾಲಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಆಸ್ಟ್ರಾ ಕಾಫಿ ಲಿಂಕ್ಸ್ ಮಾಲೀಕ ಕುಮಾರ್, ಅರ್ಜುನ ಪ್ರಶಸ್ತಿ ವಿಜೇತ ಸಿ.ಹೊನ್ನಪ್ಪ ಗೌಡ, ಬೆಂಗಳೂರಿನ ಬಿಎಂಟಿಸಿ ಯ ಗಂಗಾ ಹನುಮಯ್ಯ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಪಾಲ್ಗೊಳ್ಳಲಿದ್ದಾರೆ. ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೂಡ ಆಹ್ವಾನಿಸಲಾಗುವುದು ಎಂದರು.
ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ರೂ.15 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.10 ಸಾವಿರ ನಗದು ಹಾಗೂ ಟ್ರೋಫಿ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ತಲಾ ರೂ.5 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು.
ಪಂದ್ಯಾವಳಿಯಲ್ಲಿ 15ಕ್ಕೂ ಹೆಚ್ಚು ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಆಸಕ್ತ ತಂಡಗಳು ನ.30 ರೊಳÀಗೆ ಪ್ರವೇಶ ಶುಲ್ಕ ರೂ.1 ಸಾವಿರ ಪಾವತಿಸಿ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ 87628 80355, 63620 99525 ಸಂಪರ್ಕಿಸಬಹುದಾಗಿದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದರು.
ಭಾರತೀಯ ಪುರಾತನ ಗ್ರಾಮೀಣ ಕ್ರೀಡೆಯಾಗಿರುವ ಕಬಡ್ಡಿ ಸಾಕಷ್ಟು ಕ್ರೀಡಾ ಪ್ರತಿಭೆಗಳನ್ನು ನೀಡಿ ದೇಶದ ಕ್ರೀಡಾ ಕ್ಷೇತ್ರಕ್ಕೆ ಖ್ಯಾತಿಯನ್ನು ತಂದು ಕೊಟ್ಟಿದೆ. ಕೊಡಗಿನಲ್ಲೂ ಈ ಕ್ರೀಡೆಯನ್ನು ಪ್ರೀತಿಸುವ ಕ್ರೀಡಾಪ್ರೇಮಿಗಳಿದ್ದು, “ಮಿಸ್ಟಿ ಕಪ್” ಪಂದ್ಯಾವಳಿ ಯಶಸ್ವಿಯಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕ್ಲಬ್ ನ ಅಧ್ಯಕ್ಷ ಹೊಟ್ಟೆಯಂಡ ಸಚಿನ್ ಪೂವಯ್ಯ, ಕಾರ್ಯದರ್ಶಿ ಕಾಂಗೀರ ಗಗನ್, ಖಜಾಂಚಿ ದಿಲೀಪ್ ತೋರೆರ, ಸದಸ್ಯರುಗಳಾದ ಪೊನ್ನಚೆಟ್ಟಿರ ಪ್ರದೀಪ್ ಹಾಗೂ ಪ್ರದೀಪ್ ಕಂಡಕೆರೆ ಉಪಸ್ಥಿತರಿದ್ದರು.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*