ನಾಪೋಕ್ಲು ನ.21 : ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾಂಶವನ್ನು ಸರ್ಕಾರದ ವತಿಯಿಂದ ಅಭಿವೃದ್ಧಿಗೊಳಿಸಲಾಗಿದ್ದು, ಸರ್ಕಾರದ ಸವಲತ್ತುಗಳನ್ನು ಪಡೆಯಲು ಎಲ್ಲ ರೈತರು, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವುದು ಅವಶ್ಯಕವಾಗಿರುವುದರಿಂದ ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಮಾಹಿತಿ ದಾಖಲೆಸಿಕೊಂಡರು.
ರೈತರು ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನುಗಳ ಪಹಣಿ ಪ್ರತಿ ಗಳು, ಆಧಾರ್ ಕಾರ್ಡು, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ ಒದಗಿಸಿ ನೋಂದಣಿ ಮಾಡಿಕೊಂಡರು.
ಕೃಷಿ ,ಕಂದಾಯ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ರೈತರಿಂದ ಮಾಹಿತಿ ಪಡೆದುಕೊಂಡು ಒಟ್ಟು 85 ಅರ್ಜಿಗಳನ್ನು ಸ್ವೀಕರಿಸಿ ನೋಂದಾಯಿಸಿದರು.
ಈ ಸಂದರ್ಭ ಗ್ರಾಮ ಲೆಕ್ಕಾಧಿಕಾರಿ ಅಮೃತ ಆರ್, ಕೃಷಿ ಇಲಾಖೆಯ ಅಕೌಂಟೆಂಟ್ ಸಾಗರಿಕ, ಗ್ರಾಮ ಸಹಾಯಕ ಪ್ರಸಾದ್ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ